14ರ ಬಾಲಕಿಗೆ ಕಿರುಕುಳ ನೀಡಿದ ಯುವಕ ಸೆರೆ: ಸಹಪಾಠಿ ವಿರುದ್ಧವೂ ಪೋಕ್ಸೋ ಕೇಸು
ಕಾಸರಗೋಡು: 14ರ ಹರೆಯದ ಬಾಲಕಿಗೆ ಕಿರುಕುಳ ನೀಡಿದ ಆರೋಪದಂತೆ ಹೊಸದರ್ಗ ಪೊಲೀಸರು ಎರಡು ಪೋಕ್ಸೋ ಕೇಸುಗಳನ್ನು ದಾಖಲಿಸಿಕೊಂಡಿದ್ದಾರೆ. ಕಲ್ಲೂರಾವಿ ನಿವಾಸಿ ಮಶೂಕ್ (25) ಹಾಗೂ ಬಾಲಕಿಯ ಸಹಪಾಠಿ ವಿರುದ್ಧ ಕೇಸು ದಾಖಲಿಸಲಾಗಿದೆ. ಮಶೂಕ್ನನ್ನು ಪೊಲೀಸರು ಬಂಧಿಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯ 9ನೇ ತರಗತಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವುದಾಗಿ ದೂರಲಾಗಿದೆ. ಕೌನ್ಸಿಲಿಂಗ್ನಲ್ಲಿ ಕಿರುಕುಳ ನಡೆದಿರುವ ಬಗ್ಗೆ ಬಾಲಕಿ ಬಹಿರಂಗಪಡಿಸಿದ್ದಾಳೆ. ಇದರಂತೆ ಪೊಲೀಸರಿಗೆ ದೂರು ನೀಡಲಾಗಿತ್ತು.