ಕಾಸರಗೋಡು: 14ರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ ಹೊಸದುರ್ಗ ಕ್ಷಿಪ್ರ ವಿಶೇಷ ನ್ಯಾಯಾಲಯ 7 ವರ್ಷ ಕಠಿಣ ಸಜೆ ಹಾಗೂ 15,000 ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದೆ. ಮಡಿಕೈ ಬಂಗಳA ಕಾಕಾನ್ ಹೌಸ್ನ ಕೆ. ಅಶೋಕನ್ (47) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ 9 ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ. 2014 ಮೇ 15ರಂದು ಸಂಜೆ 14ರ ಹರೆಯದ ಬಾಲಕಿ ಮತ್ತು ಆಕೆಯ ಕುಟುಂಬ ವಾಸಿಸುತ್ತಿರುವ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ಆ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಂತೆ ನೀಲೇಶ್ವರ ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ ಕಾನೂನು ಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದರು. ಶಿಕ್ಷೆಯನ್ನು ಒಟ್ಟಿಗೆ ಅನುಭವಿಸಿದರೆ ಸಾಕೆಂದೂ ತೀರ್ಪಿನಲ್ಲಿ ತಿಳಿಸಲಾಗಿದೆ. ಅಂದು ನೀಲೇಶ್ವರ ಪೊಲೀಸ್ ಠಾಣೆಯ ಎಸ್ಐ ಆಗಿದ್ದ ಟಿ. ವಿಶಾಖ್ ಈ ಪ್ರಕರಣದ ತನಿಖೆ ನಡೆಸಿದ್ದರು.
