144 ಪ್ಯಾಕೆಟ್ ಕರ್ನಾಟಕ ಮದ್ಯ ಸ್ಕೂಟರ್ ಸಹಿತ ಓರ್ವ ಸೆರೆ
ಕಾಸರಗೋಡು: ಅಡ್ಕತ್ತಬೈಲು ಬಳಿ ಅಬಕಾರಿ ತಂಡ ನಿನ್ನೆ ಸಂಜೆ ನಡೆಸಿದ ಕಾರ್ಯಾಚರಣೆಯಲ್ಲಿ 180 ಎಂಎಲ್‌ನ 144 ಪ್ಯಾಕೆಟ್ (25.93 ಲೀಟರ್) ಕರ್ನಾಟಕ ಮದ್ಯ ಪತ್ತೆಹಚ್ಚಿ ವಶಪಡಿಸಿದೆ. ಇದಕ್ಕೆ ಸಂಬಂಧಿಸಿ ಅಡ್ಕತ್ತಬೈಲು ಅರ್ಜಾಲು ಹೌಸ್‌ನ ಅನಿಲ್ ಕುಮಾರ್ (36) ಎಂಬಾತನ್ನು ಬಂಧಿಸಲಾಗಿದೆ. ಇದಕ್ಕೆ ಸಂಬಂಧಿಸಿ ಸ್ಕೂಟರೊಂದನ್ನು ಅಬಕಾರಿ ತಂಡ ವಶಕ್ಕೆ ತೆಗೆದುಕೊಂಡಿದೆ. ಈ ಮದ್ಯ ಪ್ಯಾಕೆಟ್‌ಗಳನ್ನು ಪೊದೆಯಲ್ಲಿ ಬಚ್ಚಿಡಲಾಗಿತ್ತೆಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ.
ಕಾಸರಗೋಡು ಎಕ್ಸೈಸ್ ಸ್ಪೆಷಲ್ ಸ್ಕ್ವಾಡ್‌ನ ಅಸಿಸ್ಟೆಂಟ್ ಎಕ್ಸೈಸ್ ಇನ್‌ಸ್ಪೆಕ್ಟರ್ (ಗ್ರೇಡ್) ಸಿ.ಕೆ.ವಿ ಸುರೇಶ್ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ. ಈ ತಂಡದಲ್ಲಿ ಪ್ರಿವೆಂಟೀವ್ ಆಫೀಸರ್ (ಗ್ರೇಡ್) ನೌಶಾದ್ ಕೆ, ಸಿವಿಲ್ ಎಕ್ಸೈಸ್ ಆಫೀಸರ್‌ಗಳಾದ ಮಂಜುನಾಥನ್ ವಿ, ಅಶ್ವತಿ ವಿ.ವಿ, ಚಾಲಕ ಸಜೀಶ್ ಮತ್ತು ಇಂಟೆಲಿಜೆನ್ಸ್ ಬ್ಯೂರೋ ಪ್ರಿವೆಂಟೀವ್ ಆಫೀಸರ್ ಬಿಜೋಯ್ ಇ.ಕೆ. ಎಂಬವರು ಒಳಗೊಂಡಿದ್ದರು.