15ರ ಹರೆಯದ ಬಾಲಕಿ ನಾಪತ್ತೆ ಪ್ರಕರಣ: ಹೈಕೋರ್ಟ್ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಕೆ
ಕುಂಬಳೆ: ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾದ 15ರ ಹರೆಯದ ಬಾಲಕಿ ನಾಪತ್ತೆಯಾಗಿ ಒಂದು ತಿಂಗಳಾಗುತ್ತಾ ಬಂದರೂ ಆಕೆಯ ಕುರಿತಾಗಿ ಇದುವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಬಾಲಕಿಯ ತಾಯಿ ನ್ಯಾಯವಾದಿ ಮುಖಾಂತರ ಹೈಕೋರ್ಟ್ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಫೆಬ್ರವರಿ 12ರಂದು ಮುಂಜಾನೆಯಿಂದ ಬಾಲಕಿ ನಾಪತ್ತೆಯಾಗಿ ದ್ದಾಳೆ. ಈ ಬಗ್ಗೆ ಲಭಿಸಿದ ದೂರಿನಂತೆ ಕುಂಬಳೆ ಪೊಲೀಸರು ಕೇಸು ದಾಖಲಿಸಿ ವಿವಿಧೆಡೆ ಶೋಧ ನಡೆಸಿದರೂ ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಬಾಲಕಿಯನ್ನು ಪತ್ತೆಹಚ್ಚಲು ಇನ್ಸ್ಪೆಕ್ಟರ್ ಕೆ.ಪಿ. ವಿನೋದ್ ಕುಮಾರ್ ನೇತೃತ್ವದಲ್ಲಿ ಪೊಲೀಸರ ಮೂರು ತಂಡಗಳು ವಿವಿಧೆಡೆ ಶೋಧ ನಡೆಸುತ್ತಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.