2000 ಪ್ಯಾಕೇಟ್ ನಿಷೇಧಿತ ತಂಬಾಕು ಉತ್ಪನ್ನ ವಶ
ಕಾಸರಗೋಡು: ಉಳಿಯ ತ್ತಡ್ಕದ ಹೊಟೇಲೊಂದರ ಪರಿಸರದಲ್ಲಿ ವಿದ್ಯಾನಗರ ಪೊಲೀಸ್ ಠಾಣೆಯ ಎಸ್.ಐ. ಶಿಜು ಕೆ. ನೇತೃತ್ವದ ಪೊಲೀಸರ ತಂಡ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ರಾಜ್ಯದಲ್ಲಿ ನಿಷೇಧ ಹೇರಲಾಗಿರುವ 2000 ಪ್ಯಾಕೆಟ್ ತಂಬಾಕು ಉತ್ಪನ್ನಗಳನ್ನು ಪತ್ತೆಹಚ್ಚಿ ವಶಪಡಿಸಿ ಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿ ಪುಳಿಕ್ಕೂರಿನ ಮೊಹಮ್ಮದ್ ಅಬ್ದುಲ್ಲ ಕುಂಞಿ (43) ಎಂಬಾತನನ್ನು ವಶಕ್ಕೆ ತೆಗೆದುಕೊಂಡು ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.