ಜಿಲ್ಲೆಯ ಹಲವೆಡೆಗಳಲ್ಲಿ ಅಬಕಾರಿ ಕಾರ್ಯಾಚರಣೆ: ಮದ್ಯ ವಶ
ಕಾಸರಗೋಡು: ಜಿಲ್ಲೆಯ ವಿವಿಧೆಡೆಗಳಲ್ಲಿ ಅಬಕಾರಿ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಭಾರೀ ಪ್ರಮಾಣದ ಮದ್ಯ ಪತ್ತೆಹಚ್ಚಿ ವಶಪಡಿಸಲಾಗಿದೆ. ನಗರದ ಕರಂದಕ್ಕಾಡ್‌ನಲ್ಲಿ ಕಾಸರಗೋಡು ಎಕ್ಸೈಸ್ ಸ್ಪೆಷಲ್ ಸ್ಕ್ವಾಡ್‌ನ ಅಸಿಸ್ಟೆಂಟ್ ಎಕ್ಸೈಸ್ ಇನ್‌ಸ್ಪೆಕ್ಟರ್ ಗ್ರೇಡ್ ಶ್ರೀನಿವಾಸನ್ ನೇತೃತ್ವದ ತಂಡ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಖಾಸಗಿ ಹಿತ್ತಿಲೊಂದರಲ್ಲಿ ಬಚ್ಚಿಡಲಾಗಿದ್ದ 180 ಎಂ.ಎಲ್‌ನ 37 ಪ್ಯಾಕೆಟ್ (6.66 ಲೀಟರ್) ಕರ್ನಾಟಕ ಮದ್ಯ ಪತ್ತೆಹಚ್ಚಿ ವಶಪಡಿಸಿದೆ. ಇದೇತಂಡದ ಅಸಿ. ಎಕ್ಸೈಸ್ ಇನ್‌ಸ್ಪೆಕ್ಟರ್ (ಗ್ರೇಡ್) ಸಿಕೆವಿ ಸುರೇಶ್ ನೇತೃತ್ವದ ಅಬಕಾರಿ ತಂಡ ಕೂಡ್ಲು ವಿವೇಕಾನಂದ ನಗರದಲ್ಲಿ ನಿನ್ನೆ …