10ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ: ಐದು ದಿನಗಳಲ್ಲಿ ನೇಣಿಗೆ ಶರಣಾಗಿದ್ದು ಮೂವರು ವಿದ್ಯಾರ್ಥಿಗಳು
ಕಾಸರಗೋಡು: ಹತ್ತನೇ ತರಗತಿಯ ವಿದ್ಯಾರ್ಥಿ ಮನೆಯೊಳಗೆ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ರಾವಣೇಶ್ವರ ಕುನ್ನುಪ್ಪಾರೆ ಕರಿಪ್ಪಾಡಕ್ಕನ್ ವೀಟಿಲ್ ರಾಧಾಕೃಷ್ಣನ್-ರಜಿತಾ ದಂಪತಿ ಪುತ್ರ, ಹೊಸದುರ್ಗ ಕೇಂದ್ರೀಯ ವಿದ್ಯಾಲಯದ ೧೦ನೇ ತರಗತಿ ವಿದ್ಯಾರ್ಥಿಯಾದ ಪಿ. ರಮಿತ್ (15) ಸಾವನ್ನಪ್ಪಿದ ಬಾಲಕ. ನಿನ್ನೆ ಸಂಜೆ ಮನೆಯಲ್ಲಿ ರಮಿತ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದನು. ಅದನ್ನು ಕಂಡ ಮನೆಯವರು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ. ಕಲಿಕೆಯಲ್ಲಿ ಮುಂದಿದ್ದ ಈತ ಚೆಸ್ ತಾರೆಯೂ ಆಗಿದ್ದನು. ಮೃತನು ಹೆತ್ತವರ …