ಜಿಲ್ಲಾ ನ್ಯಾಯಾಲಯ ಸಮುಚ್ಛಯದಲ್ಲಿ ಹುಸಿ ಬಾಂಬ್ ಬೆದರಿಕೆ ಪ್ರಕರಣ: ದಾಖಲಿಸಿ ತನಿಖೆ ಆರಂಭಿಸಿದ ಸೈಬರ್ ಪೊಲೀಸರು
ಕಾಸರಗೋಡು: ವಿದ್ಯಾನಗರದಲ್ಲಿ ರುವ ಜಿಲ್ಲಾ ನ್ಯಾಯಾಲಯ ಸಮುಚ್ಛಯದಲ್ಲಿ ನಿನ್ನೆ ಉಂಟಾದ ಹುಸಿ ಬಾಂಬ್ ಬೆದರಿಕೆ ಬಗ್ಗೆ ಕಾಸರಗೋಡು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜಿಲ್ಲಾ ನ್ಯಾಯಾಲಯದ ಶಿರಸ್ತೇದಾರ್ ಅನೀಶ್ ಜೋನ್ ನೀಡಿದ ದೂರಿನಂತೆ ಈ ಪ್ರಕರಣ ದಾಖಲಿಸಲಾಗಿದೆ. ನ್ಯಾಯಾಲಯದ ಸಿಬ್ಬಂದಿಗಳು ಮತ್ತು ಸಾರ್ವಜನಿಕರಲ್ಲಿ ಭೀತಿ ಸೃಷ್ಟಿಸಲೆತ್ನಿಸುವ ಮೂಲಕ ಭದ್ರತೆಗೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸಿದ ಆರೋಪದಂತೆ ಈ ಪ್ರಕರಣ ದಾಖಲಿಸಲಾಗಿದೆ. ತಮಿಳು ಲಿಬರೇಶನ್ ಆರ್ಗನೈಸೇಶನ್ (ಟಿಎಲ್‌ಒ) ಎಂಬ ಹೆಸರಲ್ಲಿ ನಿನ್ನೆ ಮುಂಜಾನೆ 3.30ರ ವೇಳೆಗೆ ಜಿಲ್ಲಾ …