ಕುಂಬಳೆಯಲ್ಲಿ ಟೋಲ್ ಸಂಗ್ರಹಕ್ಕೆ ನಾಗರಿಕರಿಂದ ತಡೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಮೊಟಕು; ಶಾಸಕ ಸಹಿತ 60 ಮಂದಿ ಬಂಧನ
ಕುಂಬಳೆ: ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಟೋಲ್ ಪ್ಲಾಜಾದಲ್ಲಿ ಟೋಲ್ ಸಂಗ್ರಹ ಆರಂಭಿಸಿದ್ದು, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಈ ಕ್ರಮವನ್ನು ನಾಗರಿಕರು ತಡೆದಿದ್ದಾರೆ. ಶಾಸಕ ಎ.ಕೆ.ಎಂ. ಅಶ್ರಫ್‌ರ ನೇತೃತ್ವದಲ್ಲಿ ನಾಗರಿಕರು ಸ್ಥಳದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ಇದರಿಂದ ಸ್ಥಳದಲ್ಲಿ ಸಂಘರ್ಷಾವಸ್ಥೆ ಸೃಷ್ಟಿಯಾಗಿದೆ. ಘಟನೆಗೆ ಸಂಬಂಧಿಸಿ ಶಾಸಕ ಸಹಿತ 60 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಬೆಳಿಗ್ಗೆ ಟೋಲ್ ಸಂಗ್ರಹ ಆರಂಭಿಸಿರುವುದನ್ನು ತಿಳಿದು ಶಾಸಕರ ನೇತೃತ್ವದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸ್ಥಳಕ್ಕೆ ತಲುಪಿದ್ದಾರೆ. ಅನ್ಯಾಯ ರೀತಿಯಲ್ಲಿ ಟೋಲ್ ಸಂಗ್ರಹಕ್ಕೆ ಬಿಡಲಾರೆವೆಂದು ಚಳವಳಿನಿರತರು …