ಯುಡಿಎಫ್ ಸರಕಾರದ ಚೊಚ್ಚಲ ಬಜೆಟ್ ಮಂಡಿಸಿದ ಮುಖ್ಯಮಂತ್ರಿ: ಕಾಸರಗೋಡಿನ ಸರ್ವಾಂಗೀಣ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್
ತಿರುವನಂತಪುರ: ಹತ್ತು ವರ್ಷಗಳ ಬಳಿಕ ಪ್ರಚಂಡ ಬಹುಮತದೊಂದಿಗೆ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೇರಿದ ಯುಡಿಎಫ್ ಸರಕಾರದ ಚೊಚ್ಚಲ ಬಜೆಟ್‌ನ್ನು ಹಣಕಾಸು ಖಾತೆಯ ಹೊಣೆಗಾರಿಕೆಯನ್ನು ಹೊಂದಿರುವ ಮುಖ್ಯಮಂತ್ರಿ ವಿ.ಡಿ. ಸತೀಶನ್ ಇಂದು ವಿಧಾನಸಭೆಯಲ್ಲಿ ಮಂಡಿಸಿದರು. ರಾಜ್ಯದಲ್ಲಿ ಅತೀವ ಹಿಂದುಳಿದಿರುವ ಕಾಸರಗೋಡು, ವಯನಾಡು ಮತ್ತು ಇಡುಕ್ಕಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ಜ್ಯಾರಿಗೊಳಿಸಲಾಗುವುದು. ಕಾಸರಗೋಡು ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರ ಅರ್ಹರಾದ ಎಲ್ಲಾ ಸವಲತ್ತುಗಳನ್ನ್ನು ಜ್ಯಾರಿಗೊಳಿಸಲಾಗುವುದು ಮಾತ್ರವಲ್ಲದೆ ಎಂಡೋಸಲ್ಫಾನ್ ಸಂತ್ರಸ್ತರನ್ನು ಸರಕಾರವೇ ವಹಿಸಿಕೊಳ್ಳಲಿದೆ. ಕಾಸರಗೋಡಿನ ವೈದ್ಯಕೀಯ ಕಾಲೇಜು ನಿರ್ಮಾಣ ಕೆಲಸಗಳನ್ನು ಶೀಘ್ರ …