ಮಂಜೇಶ್ವರ ಗಿಳಿವಿಂಡುನಲ್ಲಿ ಪುವೆಂಪು ನೆನಪುಗಡಿನಾಡು, ಹೊರನಾಡು ಕನ್ನಡಿಗರಿಗಾಗಿ ವಿಶೇಷ ಸಾಂಸ್ಕೃತಿಕನೀತಿ ರೂಪಿಸಬೇಕು- ಡಾ. ಬರಗೂರು ರಾಮಚಂದ್ರಪ್ಪ
ಮಂಜೇಶ್ವರ: ಗಡಿನಾಡು ಮತ್ತು ಹೊರನಾಡು ಕನ್ನಡಿಗರನ್ನು ಒಳಗೊಂಡAತೆ ಕರ್ನಾಟಕ ಸರಕಾರ ಹೊಸ ಸಾಂಸ್ಕೃತಿಕ ನೀತಿಯನ್ನು ರೂಪಿಸಬೇಕು. ಉಭಯ ವಿಭಾಗಗಳ ಕನ್ನಡಿಗರ ಅಭಿವೃದ್ಧಿಗಾಗಿ ಪ್ರತಿ ಬಜೆಟ್‌ನಲ್ಲೂ ವಿಶೇಷ ಆರ್ಥಿಕ ಪ್ಯಾಕೇಜ್ ಮೀಸಲಿಡಬೇಕು ಎಂದು ಹಿರಿಯ ಸಾಹಿತಿ ಹಾಗೂ ಚಲನಚಿತ್ರ ನಿರ್ದೇಶಕ ಡಾ. ಬರಗೂರು ರಾಮಚಂದ್ರಪ್ಪ ಕರ್ನಾಟಕ ಸರಕಾರವನ್ನು ಆಗ್ರಹಿಸಿದರು.ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಪುವೆಂಪು ಪ್ರತಿಷ್ಠಾನ, ತುಳು ಭವನ, ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕ ಟ್ರಸ್ಟ್ಗಳ ಸಂಯುಕ್ತ ಆಶ್ರಯದಲ್ಲಿ ಮಂಜೇಶ್ವರ ಗಿಳಿವಿಂಡುನಲ್ಲಿ ಆಯೋಜಿಸಿದ್ದ ಬಹುಭಾಷಾ ವಿದ್ವಾಂಸ ಡಾ. …