ಮಂಜೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರಕಾರಿ ಆಸ್ಪತ್ರೆಗಳಲ್ಲಿ ಆಧುನಿಕ ಹೆರಿಗೆ ಚಿಕಿತ್ಸಾ ಸೌಲಭ್ಯಕ್ಕೆ ಸಚಿವರಿಗೆ ಯುವ ಕಾಂಗ್ರೆಸ್‌ನಿಂದ ಮನವಿ
ಪೆರ್ಲ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಸರಕಾರಿ ಆಸ್ಪತ್ರೆಗಳಲ್ಲಿ ಖಾಯಂ ಸ್ತ್ರೀರೋಗ ತಜ್ಞರ ಸೇವೆ ಹಾಗೂ ಆಧುನಿಕ ಹೆರಿಗೆ ವಾರ್ಡ್ ಸೇರಿದಂತೆ ಅಗತ್ಯ ಹೆರಿಗೆ ಚಿಕಿತ್ಸಾ ಸೌಲಭ್ಯಗಳನ್ನು ತುರ್ತಾಗಿ ಒದಗಿಸಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್ ಎಣ್ಮಕಜೆ ಮಂಡಲ ಸಮಿತಿ ಆರೋಗ್ಯ ಸಚಿವ ಕೆ. ಮುರಳೀಧರನ್‌ರಿಗೆ ಮನವಿ ಸಲ್ಲಿಸಿದೆ. ಎಣ್ಮಕಜೆ ಸೇರಿದಂತೆ ಸುಮಾರು ಎಂಟು ಪಂಚಾಯತ್‌ಗಳನ್ನು ಒಳಗೊಂಡಿರುವ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಸರಕಾರಿ ಆರೋಗ್ಯ ಕೇಂದ್ರಗಳಲ್ಲಿ ಖಾಯಂ ಸ್ತ್ರೀರೋಗ ತಜ್ಞರು ಹಾಗೂ ಹೆರಿಗೆ ಚಿಕಿತ್ಸೆಗೆ ಅಗತ್ಯವಾದ ಮೂಲಸೌಕರ್ಯಗಳ ಕೊರತೆಯಿಂದ ಸಾರ್ವಜನಿಕರು …