ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಕಾಸರಗೋಡು ಕನ್ನಡ ಗ್ರಾಮದಲ್ಲಿ ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನಕ್ಕೆ ಚಾಲನೆ
ಕಾಸರಗೋಡು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡು ಇದರ ನೇತೃತ್ವದಲ್ಲಿ ಕೇರಳ ರಾಜ್ಯ ೮ನೇ ಕನ್ನಡ ಸಮ್ಮೇಳನ-2026, ಕೇರಳ-ಕರ್ನಾಟಕ ಉತ್ಸವ ಕಾಸರಗೋಡು ಕನ್ನಡ ಗ್ರಾಮದಲ್ಲಿ ಇಂದು ಬೆಳಿಗ್ಗೆ ಸಾಂಸ್ಕೃತಿಕ ಮೆರವಣಿಗೆ ಯೊಂದಿಗೆ ಆರಂಭಗೊಂಡಿತು. ಮೆರವಣಿಗೆಯನ್ನು ಮಧೂರು ಪಂಚಾಯತ್ ಅಧ್ಯಕ್ಷೆ ಸುಜ್ಞಾನಿ ಶ್ಯಾನುಭೋಗ್ ಉದ್ಘಾಟಿಸಿ ದರು. ಕೆ.ಎನ್. ವೆಂಕಟ್ರಮಣ ಹೊಳ್ಳ, ಜಯಾನಂದ ಕುಮಾರ್ ಕಾಸರಗೋಡು ಮೊದಲಾದವರು ಉಪಸ್ಥಿತರಿದ್ದರು. ಬಳಿಕ ರಾಷ್ಟ್ರಧ್ವಜಾರೋಹಣ ಹಾಗೂ ಕನ್ನಡ ಧ್ವಜಾರೋಹಣ ನಡೆಯಿತು. ಅನಂತರ ಕೇರಳ ರಾಜ್ಯ ೮ನೇ ಕನ್ನಡ ಸಮ್ಮೇಳನ, ಕೇರಳ-ಕರ್ನಾಟಕ ಉತ್ಸವ ಉದ್ಘಾಟನೆಗೊಂಡಿತು. ಬೆಂಗಳೂರು …