ಕಾಸರಗೋಡು: ಕೂಡ್ಲು ಎರಿಯಾಲ್‌ನಲ್ಲಿ ಕಾಸರಗೋಡು ಪೊಲೀಸರು ನಡೆಸಿದ ಕಾರ್ಯಾ ಚರಣೆಯಲ್ಲಿ ಕೇರಳದಲ್ಲಿ ನಿಷೇಧ ಹೇರಲಾದ 2031 ಪ್ಯಾಕೆಟ್ ತಂಬಾಕು ಉತ್ಪನ್ನಗಳನ್ನು ಪತ್ತೆಹಚ್ಚಿ ವಶಪಡಿಸಲಾಗಿದೆ.
ಇದಕ್ಕೆ ಸಂಬಂಧಿಸಿ ಕೂಡ್ಲು ಎರಿಯಾಲ್ ನಿವಾಸಿ ಅಬ್ದುಲ್ ಸಮದ್ ಇ.ಎಂ (42) ಎಂಬಾತನ ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.