ಕಾಸರಗೋಡು: ನಗರದ ಅಶೋಕನಗರದಲ್ಲಿ ಅಬಕಾರಿ ತಂಡ ನಡೆಸಿದ ಕಾರ್ಯಾಚರಣೆ ವೇಳೆ ಸ್ಕೂಟರ್‌ನಲ್ಲಿ ಸಾಗಿಸುತ್ತಿದ್ದ 25.92 ಲೀಟರ್ ಕರ್ನಾಟಕ ಮದ್ಯ ಪತ್ತೆಹಚ್ಚಿ ವಶಪಡಿಸಲಾಗಿದೆ. ಇದಕ್ಕೆ ಸಂಬಂಧಿಸಿ ನೆಲ್ಲಿಕುಂಜೆ ಬೀಚ್ ರಸ್ತೆಯ ಗಣೇಶ್ ಪಿ ಎಂಬಾತನ ವಿರುದ್ಧ ಕೇಸು ದಾಖಲಿಸಲಾಗಿದೆ. ಆತ ಪರಾರಿಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಕಾಸ ರಗೋಡು ಅಬಕಾರಿ ಸ್ಪೆಷಲ್ ಸ್ಕ್ವಾಡ್‌ನ ಅಸಿಸ್ಟೆಂಟ್ ಎಕ್ಸೈಸ್ ಇನ್‌ಸ್ಪೆಕ್ಟರ್ (ಗ್ರೇಡ್) ಸಿಕೆವಿ ಸುರೇಶ್ ನೇತೃತ್ವದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಪ್ರಿವೆಂ ಟೀವ್ ಆಫೀಸರ್ (ಗೇರ್ಡ್) ನೌಶಾದ್ ಕೆ ಮತ್ತು ಅಜೀಶ್ ಸಿ ಎಂಬಿವರು ಒಳಗೊಂಡಿದ್ದರು.
