27 ವರ್ಷಗಳ ನಂತರ ದಿಲ್ಲಿ ಗದ್ದುಗೆಗೆ ಬಿಜೆಪಿ


ನವದೆಹಲಿ: ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ಬೆಳಿಗ್ಗೆ ಆರಂಭಗೊAಡಿರುವAತೆಯೇ ದಿಲ್ಲಿ ಗದ್ದುಗೆಗೆ ಬಿಜೆಪಿ ಏರುವುದು ಪಕ್ಕಾಗೊಂಡಿದೆ. ಆ ಮೂಲಕ 27 ವರ್ಷಗಳ ಬಳಿಕ ಬಿಜೆಪಿಗೆ ಇದೇ ಮೊದಲ ಬಾರಿಗೆ ದಿಲ್ಲಿ ರಾಜ್ಯದ ಆಡಳಿತ ಚುಕ್ಕಾಣಿ ಲಭಿಸುವಂತಾಗಿದೆ.
ದಿಲ್ಲಿ ವಿಧಾನಸಭೆಯ ಒಟ್ಟು 70 ಸ್ಥಾನಗಳಲ್ಲಿ ಬಿಜೆಪಿ 41, ಆಡಳಿತಾರೂಢ ಆಮ್ಆದ್ಮಿ ಪಾರ್ಟಿ (ಎಎಪಿ) 29 ಸ್ಥಾನದಲ್ಲಿ ಮುನ್ನಡೆಯಲ್ಲಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ಗೆ ಕನಿಷ್ಠ ಒಂದು ಕ್ಷೇತ್ರದಲ್ಲಾದರೂ ಮುನ್ನಡೆ ಸಾಧಿಸಲು ಸಾಧ್ಯವಾಗದೆ ತೀವ್ರ ಮುಖಭಂಗಕ್ಕೀಡಾಗಿದೆ. ಇಂದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭಗೊAಡಿದೆ. ಈ ಚುನಾವಣೆಯಲ್ಲಿ ಒಟ್ಟು 699 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. 2020ರ ಚುನಾವಣೆಯಲ್ಲಿ 668 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.
ಈ ಬಾರಿಯ ಚುನಾವಣೆಯಲ್ಲಿ ಶೇ. 60.54 ಮತದಾರರು ತಮ್ಮ ಮತ ಚಲಾಯಿಸಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮತ್ತು ಚಿರಾಗ್ ಪಾಸ್ವಾನ್ ನೇತೃತ್ವದ ಲೋಕಜನಶಕ್ತಿ(ರಾಮ್ವಿಲಾಸ್) ಈ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ಘೋಷಿಸಿತ್ತು. ಎಎಪಿಯ ಅರವಿಂದ ಕೇಜ್ರೀವಾಲ್ 2015ರಿಂದ 2020ರ ವರೆಗೆ ಹಾಗೂ ಮತ್ತೆ 2020ರಿಂದ 24ರ ತನಕ ದೆಹಲಿ ಮುಖ್ಯಮಂತ್ರಿಯಾಗಿದ್ದರು. ನಂತರ ಕಳೆದ ಸೆಪ್ಟಂಬರ್ 24ರಿಂದ ಆತಿಶಿ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೇರಿದ್ದರು.

Leave a Reply

Your email address will not be published. Required fields are marked *

You cannot copy content of this page