ಕಾಸರಗೋಡು: ನಗರದ ನೆಲ್ಲಿಕುಂಜೆ ಪಿ.ಎಸ್. ಗುಡ್ಡೆ ಬಳಿ ಅಬಕಾರಿ ಅಧಿಕಾರಿಗಳು ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಪೊದೆಯಲ್ಲಿ ಬಚ್ಚಿಡಲಾಗಿದ್ದ 336 ಟೆಟ್ರಾ ಪ್ಯಾಕೆಟ್ ಕರ್ನಾಟಕ ಮದ್ಯ (6.48 ಲೀಟರ್ ಪತ್ತೆ) ಹಚ್ಚಿ ವಶಪಡಿಸಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿ ನೆಲ್ಲಿಕುಂಜೆ ಪಿ.ಎಸ್. ಗುಡ್ಡೆ ನಿವಾಸಿ ಸತೀಶ್ ಎನ್. (೪೪) ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಕಾಸರಗೋಡು ಎಕ್ಸೈಸ್ ಎನ್ಫೋರ್ಸ್ಮೆಂಟ್ ಆಂಡ್ ನರ್ಕೋಟಿಕ್ಸ್ ಸ್ಪೆಷಲ್ ಸ್ಕ್ವಾಡ್ನ ಅಸಿಸ್ಟೆಂಟ್ ಎಕ್ಸೈಸ್ ಇನ್ಸ್ಪೆಕ್ಟರ್ (ಗ್ರೇಡ್)ರ ನೇತೃತ್ವದ ಅಬಕಾರಿ ತಂಡ ಈ ಕಾರ್ಯಾಚರಣೆ ನಡೆಸಿದೆ. ತಂಡದಲ್ಲಿ ಸಿವಿಲ್ ಎಕ್ಸೈಸ್ ಆಫೀಸರ್ಗಳಾದ ಸತೀಶ್ ಕೆ, ಅತುಲ್ ಟಿ.ವಿ, ರಾಜೇಶ್, ಧನ್ಯ, ಅಶ್ವತಿ ಮತ್ತು ಚಾಲಕ ಸಜೀಶ್ ಎಂಬವರು ಒಳಗೊಂಡಿದ್ದರು.





