ಬದಿಯಡ್ಕ: ಐದರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ದೂರಿನಂತೆ 50ರ ಹರೆಯದ ವ್ಯಕ್ತಿ ವಿರುದ್ಧ ಬದಿಯಡ್ಕ ಪೊಲೀಸರು ಪೋಕ್ಸೋ ಕಾಯ್ದೆ ಪ್ರಕಾರ ಕೇಸು ದಾಖಲಿಸಿಕೊಂಡಿದ್ದಾರೆ. ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದಕ್ಕೆ ಕೆಲಸಕ್ಕೆಂದು ಬಂದ ವ್ಯಕ್ತಿ ಬಾಲಕಿಗೆ ಕಿರುಕುಳ ನೀಡಿರುವುದಾಗಿ ದೂರಲಾಗಿದೆ.