ಕಾಸರಗೋಡು: ನಗರದ ಬ್ಯಾಂಕ್ ರಸ್ತೆ ಪರಿಸರದಲ್ಲಿ ಕಾಸರಗೋಡು ಪೊಲೀಸರು ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಭಾರೀ ಮಾದಕ ದ್ರವ್ಯವಾದ 8.87 ಗ್ರಾಂ ಎಂಡಿಎಂಎ ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.
ಇದಕ್ಕೆ ಸಂಬಂಧಿಸಿ ನೀರ್ಚಾಲ್ ಮೂಕಂಪಾರೆ ನಿವಾಸಿ ಎಂ.ಎಸ್. ಅಬ್ದುಲ್ ಮುಜೀಬ್ (23) ಎಂಬಾತನನ್ನು ಎಸ್ಐ ಸವ್ಯಸಾಚಿ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ನಗರದ ಖಾಸಗಿ ಆಸ್ಪತ್ರೆಯೊಂದರ ಪರಿಸರದಿಂದ ಆರೋಪಿಯನ್ನು ಸೆರೆ ಹಿಡಿಯಲಾಗಿದೆ. ಆತ ಮಾದಕ ದ್ರವ್ಯ ಸಾಗಿಸುವ ಬಗ್ಗೆ ಪೊಲೀಸರಿಗೆ ಗುಪ್ತ ಮಾಹಿತಿ ಲಭಿಸಿತ್ತು. ಅದರ ಜಾಡು ಹಿಡಿದು ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಮಾಲು ಸಹಿತ ಬಂಧಿಸಲಾಗಿದೆ ಪೊಲೀಸರು ತಿಳಿಸಿದ್ದಾರೆ.