990 ಗ್ರಾಂ ಗಾಂಜಾ ಪತ್ತೆ: ಇಬ್ಬರ ಸೆರೆ
ಕುಂಬಳೆ: ಚುಕ್ಕಿನಡ್ಕ ಬೈತಲ ರಸ್ತೆಯಲ್ಲಿ ಸ್ಕೂಟರ್‌ನಲ್ಲಿ ಸಾಗಿಸುತ್ತಿದ್ದ 990 ಗ್ರಾಂ ಗಾಂಜಾವನ್ನು ಪೊಲೀಸರು ಪತ್ತೆಹಚ್ಚಿ ವಶಪಡಿಸಿದ್ದಾರೆ. ಇದಕ್ಕೆ ಸಂಬಂಧಿಸಿ ಮಂಗಳೂರು ಕೋಟೆಕಾರು ನಿವಾಸಿ ಅಬ್ಬಾಸ್ (47) ಮತ್ತು ಚುಕ್ಕಿನಡ್ಕದ ಅಬ್ದುಲ್ಲ (64) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಕುಂಬಳೆ ಇನ್‌ಸ್ಪೆಕ್ಟರ್ ಕೆ. ವಿನೋದ್ ಕುಮಾರ್ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.