9ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಇಬ್ಬರ ಸೆರೆ, ನ್ಯಾಯಾಂಗ ಬಂಧನ

ಕಾಸರಗೋಡು: 9ನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಇಬ್ಬರನ್ನು ಚಂದೇರ ಪೊಲೀಸರು ಬಂಧಿಸಿದ್ದಾರೆ. ತೃಕ್ಕರಿಪುರ ನಿವಾಸಿ ಅಸೀಸ್ (70) ಮತ್ತು ವಲಿಯ ಪರಂಬ ನಿವಾಸಿ ಸಲೀಂ (48) ಬಂಧಿತರಾದ ಆರೋಪಿಗಳು. ಚಂದೇರ ಪೊಲೀಸ್ ಠಾಣೆಯ ವ್ಯಾಪ್ತಿಗೊಳಪಟ್ಟ ಬಾಲಕಿಯೋ ರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ದೂರಿನಂತೆ ಈ ಇಬ್ಬರ ವಿರುದ್ಧ ಪೊಲೀಸರು ಪೋಕ್ಸೋ ಕಾನೂನು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತರನ್ನು ಬಳಿಕ ಹೊಸದುರ್ಗ ಪ್ರಥಮ ದರ್ಜೆ ಮೆಜಿಸ್ಟ್ರೇಟ್ ನ್ಯಾಯಾಲಯ (1)ರ ಆದೇಶ ಪ್ರಕಾರ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.

You cannot copy contents of this page