ಸಂಸದ ರಾಜ್‌ಮೋಹನ್ ಉಣ್ಣಿತ್ತಾನ್‌ರಿಗೆ ಕಾಸರಗೋಡು, ಮಂಜೇಶ್ವರದಲ್ಲಿ ಅದ್ದೂರಿ ಸ್ವಾಗತ

ಕಾಸರಗೋಡು: ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ರಾಜ್‌ಮೋಹನ್ ಉಣ್ಣಿತ್ತಾನ್‌ರಿಗೆ ಕಾಸರಗೋಡು, ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಅದ್ದೂರಿಯ ಸ್ವಾಗತ ನೀಡಲಾಯಿತು.

ಯುಡಿಎಫ್ ಪದಾಧಿಕಾರಿಗಳ ನೇತತ್ವದಲ್ಲಿ ಚೆರ್ಕಳದಿಂದ ತೆರೆದ ಜೀಪಿನಲ್ಲಿ ಉಣ್ಣಿತ್ತಾನ್‌ರನ್ನು ಮೆರವಣಿಗೆಯಲ್ಲಿ ಕರೆದೊಯ್ದಿದ್ದು ಜತೆಗೆ ದ್ವಿಚಕ್ರ ವಾಹನ, ಕಾರುಗಳಲ್ಲಿ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಕಾಸರಗೋಡು ಲೋಕಸಭಾ ಕ್ಷೇತ್ರದಿಂದ ದ್ವಿತೀಯ ಬಾರಿಗೆ ಭಾರೀ ಬಹುಮತದೊಂದಿಗೆ ರಾಜ್‌ಮೋಹನ್ ಉಣ್ಣಿತ್ತಾನ್ ಗೆಲುವು ಸಾಧಿಸಿದ್ದರು.

RELATED NEWS

You cannot copy contents of this page