ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ :ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್ಐಆರ್
ನವದೆಹಲಿ: ತಮ್ಮ ತಂದೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ ನೇತೃತ್ವದ ತಮಿಳುನಾಡು ಸರಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಡಿಎಂಕೆಯ ಯುವ ನಾಯಕ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಗಾಗಿ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಯೊಂದಿಗೆ ಹೋಲಿಸಿದ ಉದಯನಿಧಿ ಸ್ಟಾಲಿನ್ ಅವರು ಅದರ ವಿರುದ್ಧ ಕಿಡಿಕಾರಿದ್ದರು. ಮಾತ್ರವಲ್ಲ ಇದು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ, ಅದನ್ನು ನಿರ್ಮೂಲನೆ ಮಾಡಬೇಕು ಎಂಬ ರೀತಿಯ ವಿವಾದಾತ್ಮಕ ರೀತಿಯ ಹೇಳಿಕೆ ನೀಡಿದ್ದಾರೆ.
ಉದಯನಿಧಿ ಸ್ಟಾಲಿನ್ನ ಇಂತಹ ವಿವಾದಾತ್ಮಕ ಹೇಳಿಕೆ ವಿರುದ್ಧ ಸುಪ್ರೀಂಕೋರ್ಟ್ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ವಿನೀತ್ ಜಿಂದಾಲ್ರವರು ದಿಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ಅದರಲ್ಲಿ ದಿಲ್ಲಿ ಪೊಲೀಸರು ಉದಯನಿಧಿ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಐಟಿ ಕಾಯ್ದೆಯ ಸೆಕ್ಷನ್ ೧೨೦ ಬಿ, ೧೫೩ ಎ, ೨೯೫ ಮತ್ತು ೫೦೪ ಅಡಿ ಸನಾತನ ಧರ್ಮ ವಿರುದ್ಧ ಪ್ರಚೋದನಕಾರಿ ಮತ್ತು ಮಾನಹಾನಿಕರ ಹೇಳಿಕೆಗಾಗಿ ಎಫ್ಐಆರ್ ದಾಖಲಿ ಸಿಕೊಂಡಿದ್ದರು. ಉದಯನಿಧಿಯಿಂದ ಇಂತಹ ವಿವಾ ದಾತ್ಮಕ ಹೇಳಿಕೆ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆ ತಲೆಯೆತ್ತಿವೆ.