ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರ ಸೇವಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ
ಮೀಯಪದವು: ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸೇವಾ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಸತೀಶ್ಚಂದ್ರ ರೈ ದೇರಂಬಳ ಆಯ್ಕೆಗೊಂಡಿದ್ದು, ಗೌರವ ಅಧ್ಯಕ್ಷರಾಗಿ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಉಪಾಧ್ಯಕ್ಷರಾಗಿ ಪುಷ್ಪರಾಜ್ ಶೆಟ್ಟಿ ತಲೇಕಳ, ರವೀಂದ್ರ ರೈ ಕೋಡಿ, ಅರವಿಂದಾಕ್ಷ ಭಂಡಾರಿ ದಡ್ಡಂಗಡಿ, ಮೋಹನಪ್ಪ ಪೂಜಾರಿ ಕಲ್ಕಾರ್, ಶಂಕರ ನಾರಾಯಣ ಭಟ್ ಮುಂದಿಲ, ಪ್ರಧಾನ ಕಾರ್ಯದರ್ಶಿಯಾಗಿ ಜಯರಾಮ ಚಿನಾಲ, ಜೊತೆ ಕಾರ್ಯದರ್ಶಿಗಳಾಗಿ ಅಶ್ವಿನ್ ಬುಡ್ರಿಯಾ, ನವೀನ್ ಮದಂಗಲ್ಲು, ಸದಾನಂದ ಕೋಡಿ, ಕೋಶಾಧಿಕಾರಿಯಾಗಿ ಸದಾಶಿವ ಶೆಟ್ಟಿ ಪಳ್ಳತ್ತಡ್ಕ ಹಾಗೂ ೨೧ ಮಂದಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಸಮಾರಂಭದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರ ವಸಂತ ಭಟ್ ತೊಟ್ಟೆತೋಡಿ ಅಧ್ಯಕ್ಷತೆ ವಹಿಸಿದರು. ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತೋಡಿ, ಚಂದ್ರಹಾಸ ಶೆಟ್ಟಿ ಕುಳೂರು, ಸೇವಾ ಸಮಿತಿ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ತಲೇಕಳ, ಟ್ರಸ್ಟಿ ಕಾರ್ಯದರ್ಶಿ ಶ್ರೀಧರ ರಾವ್ ಆರ್.ಎಂ. ಉಪಸ್ಥಿತರಿದ್ದರು.