ಯುವಮೋರ್ಚಾದಿಂದ ತಿರಂಗ ಬೈಕ್ ರ‍್ಯಾಲಿ

ಉಪ್ಪಳ: ಯುವ ಮೋರ್ಚಾ ನೇತೃತ್ವದಲ್ಲಿ ಮಂಜೇಶ್ವರ ವಿಧಾನಸಭಾ ವ್ಯಾಪ್ತಿಯಲ್ಲಿ ನಡೆದ ತಿರಂಗ ಬೈಕ್ ರ‍್ಯಾಲಿ ಹೊಸಂಗಡಿಯಿAದ ಹೊರಟು ಕುಂಬಳೆಯಲ್ಲಿ ಸಮಾ ರೋಪ ಗೊಂಡಿತು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ರೈ, ಯುವಮೋರ್ಚಾ ಕುಂಬ್ಳೆ ಮಂಡಲ ಅಧ್ಯಕ್ಷ ಅವಿನಾಶ ಕಾರಂತರಿಗೆ ತಿರಂಗ ಧ್ವಜ ಹಸ್ತಾಂತರಿಸಿ ಉದ್ಘಾಟಿಸಿದರು. ಯುವ ಮೋರ್ಚಾ ಜಿಲ್ಲಾಧ್ಯಕ್ಷ ಅಂಜು ಜೋಸ್ಟಿ, ಬಿಜೆಪಿ ರಾಜ್ಯ ಸಮಿತಿ ಸದಸ್ಯ ಸತೀಶ್ ಚಂದ್ರ ಭಂಡಾರಿ, ಮಣಿಕಂಠ ರೈ, ಎ.ಕೆ. ಕಯ್ಯಾರ್, ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ್ ಬಿ.ಎಂ, ಕುಂಬಳೆ ಮಂಡಲ ಅಧ್ಯಕ್ಷ ಸುನಿಲ ಅನಂತಪುರ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ವಸಂತಕುಮಾರ್ ಮಯ್ಯ, ಯತಿ ರಾಜ್, ಕೆ.ವಿ ಭಟ್ ಹಾಗು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಭಾಗವಹಿಸಿದ್ದರು. ಕುಂಬಳೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ರಾಜ್ಯ ಕೌನ್ಸಿಲ್ ಸದಸ್ಯ ವಿ. ರವೀಂದ್ರನ್ ಮಾತನಾಡಿದರು.

You cannot copy contents of this page