ನಾಲ್ಕು ದಿನಗಳ ಹಿಂದೆ ಬೆಂಗಳೂರಿನಿಂದ ಊರಿಗೆ ಬಂದ ಯುವಕ ನೇಣು ಬಿಗಿದು ಸಾವು

ನೀರ್ಚಾಲು: ನಾಲ್ಕು ದಿನಗಳ ಹಿಂದೆಯಷ್ಟೇ ಬೆಂಗಳೂರಿನಿಂದ ಊರಿಗೆ ಬಂದ ಯುವಕ ಮನೆಯೊಳಗೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮಾನ್ಯ ಚುಕ್ಕಿನಡ್ಕದ ಜಯರಾಮ ಎಂಬವರ ಪುತ್ರ ರಿತೇಶ್ ಸಿ.ಎಚ್. (29) ಮೃತಪಟ್ಟ ಯುವಕ. ನಿನ್ನೆ ಮಧ್ಯಾಹ್ನ ವೇಳೆ ಇವರು ಮನೆಯೊಳಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ವಿಷಯ ತಿಳಿದು ಬದಿಯಡ್ಕ ಪೊಲೀಸರು ತಲುಪಿ ಮೃತದೇಹದ ಮಹಜರು ನಡೆಸಿದರು. ಬಳಿಕ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಮನೆ ಹಿತ್ತಿಲಿನಲ್ಲಿ  ಅಂತ್ಯ ಸಂಸ್ಕಾರ ನಡೆಸಲಾಯಿತು.

ರಿತೇಶ್ ಕೆಲವು ತಿಂಗಳಿಂದ ಬೆಂಗಳೂರಿನಲ್ಲಿ ಇಲೆಕ್ಟ್ರೀಶ್ಯನ್ ಆಗಿದ್ದರು. ನಾಲ್ಕು ದಿನಗಳ ಹಿಂದೆ ಊರಿಗೆ ಬಂದ ಇವರು ನಿನ್ನೆ ಸಂಜೆ ಮರಳಿ ಬೆಂಗಳೂರಿಗೆ ತೆರಳಲು ಸಿದ್ಧತೆ ನಡೆಸಿದ್ದರು. ಆದರೆ ದಿಢೀರ್ ಇವರು ನೇಣು ಬಿಗಿದು ಸಾವಿಗೀಡಾಗಲು ಕಾರಣವೇನೆಂದು ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ ಸುಗಂಧಿ, ಸಹೋದರ ಶಬರೀಶ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

RELATED NEWS

You cannot copy contents of this page