ಬ್ಯಾಂಕ್‌ನ ಪಿಗ್ಮಿ ಕಲೆಕ್ಷನ್ ಏಜೆಂಟ್ ನಾಪತ್ತೆ: ಸ್ಕೂಟರ್ ಚಂದ್ರಗಿರಿ ಸೇತುವೆ ಬಳಿ ಪತ್ತೆ

ಕಾಸರಗೋಡು: ಪಿಗ್ಮಿ ಕಲೆಕ್ಷನ್ ಎಜೆಂಟ್ ನಿನ್ನೆ ರಾತ್ರಿಯಿಂದ ನಾಪತ್ತೆಯಾಗಿದ್ದು ಅದರ ಬೆನ್ನಲ್ಲೇ ಅವರ ಸ್ಕೂಟರ್ ಚಂದ್ರಗಿರಿ ಸೇತುವೆ ಬಳಿ ಉಪೇಕ್ಷಿತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕಲ್ಲಕಟ್ಟೆ ಸಮೀಪದ ಪಾಂಬಾಚಿಕಡವು ಶ್ರೀ ಅಯ್ಯಪ್ಪ ಭಜನಾ ಮಂದಿರ ಬಳಿಯ ಬನ್ನಡ್ಕ ಹೌಸ್‌ನ ಆನಂದನ್ ಎಂಬವರ ಪುತ್ರ ಕಾಸರಗೋಡು  ಸಹಕಾರಿ ಬ್ಯಾಂಕ್‌ನ ಪಿಗ್ಮಿ ಕಲೆಕ್ಷನ್ ಏಜೆಂಟ್ ರಮೇಶನ್ ಬಿ.ಎ (5೦) ಎಂಬವರು ನಾಪತ್ತೆಯಾದ ವ್ಯಕ್ತಿ. ಆ ಬಗ್ಗೆ ಇವರ ಸಹೋದರ ದಿನೇಶನ್ ಬಿ.ಎ ನೀಡಿದ ದೂರಿನಂತೆ ವಿದ್ಯಾನಗರ ಪೊಲೀಸರು ಮಿಸ್ಸಿಂಗ್ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಇದೇ ವೇಳೆ ರಮೇಶನ್ ಉಪಯೋಗಿಸುತ್ತಿರುವ ಸ್ಕೂಟರ್ ಚಂದ್ರಗಿರಿ ಸೇತುವೆ ಬಳಿ ಪೊಲೀಸರು ಪತ್ತೆಹಚ್ಚಿದ್ದಾರೆ. ಅದರಲ್ಲಿ ಪಿಗ್ಮಿ ಕಲೆಕ್ಷನ್ ಹಣ, ಮೊಬೈಲ್ ಫೋನ್ ಇತ್ಯಾದಿಗಳು ಪತ್ತೆಯಾಗಿದೆ. ಅದನ್ನು  ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.  ರಮೇಶನ್‌ರ ಸ್ಕೂಟರ್ ಚಂದ್ರಗಿರಿ ಸೇತುವೆ ಬಳಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಶಂಕೆಗೊಂಡ ಪೊಲೀಸರು ನೀಡಿದ ಮಾಹಿತಿಯಂತೆ ಕಾಸರಗೋಡು ಅಗ್ನಿಶಾಮಕದಳ ನಿನ್ನೆ ರಾತ್ರಿಯಿಂದ ಚಂದ್ರಹಿರಿ ಹೊಳೆಯಲ್ಲಿ ವ್ಯಾಪಕ ಶೋಧ ಆರಂಭಿಸಿದ್ದು, ಅದು ಈಗಲೂ ಮುಂದುವರಿಯುತ್ತಿದೆ. ಜತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

You cannot copy contents of this page