3000ದಷ್ಟು ಇ-ಸಿಗರೇಟ್ ಪತ್ತೆ: ಇಬ್ಬರು ಪೊಲೀಸ್ ಕಸ್ಟಡಿಗೆ

ಕಾಸರಗೋಡು: ನಗರದ ಪ್ರೆಸ್‌ಕ್ಲಬ್ ಜಂಕ್ಷನ್ ಬಳಿ ಕಾಸರಗೋಡು ಪೊಲೀಸರು ನಡೆಸಿದ ಕಾರ್ಯಾ ಚರಣೆಯಲ್ಲಿ ವಾಹನವೊಂದರಲ್ಲಿ ಸಾಗಿಸುತ್ತಿದ್ದ ಸುಮಾರು 3000ದಷ್ಟು ಇ-ಸಿಗರೇಟ್‌ನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿ ಮಂಜೇಶ್ವರ ನಿವಾಸಿಗಳಾದ ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಿಸತೊಡಗಿದ್ದಾರೆ. ವಿದ್ಯಾರ್ಥಿಗಳಿಗೆ ವಿತರಿಸಲೆಂದು ಈ ಅಮಲು ಇ ಸಿಗರೇಟನ್ನು ಈ ಇಬ್ಬರು ವಾಹನದಲ್ಲಿ ಸಾಗಿಸುತ್ತಿದ್ದರೆಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ. ಮಲ ಪ್ಪುರಂನಿಂದ ಇದನ್ನು ಕಾಸರಗೋಡಿಗೆ ತರಲಾಗುತ್ತಿತ್ತೆಂದು ಪೊಲೀಸರು ಶಂಕಿಸುತ್ತಿದ್ದಾರೆ.

Leave a Reply

Your email address will not be published. Required fields are marked *

You cannot copy content of this page