ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ಸಮಾರೋಪ ನಾಳೆ

ಪಡುಕುತ್ಯಾರು: ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತಿ ಪೀಠದ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸ್ವಾಮೀಜಿಯವರ ಚಾತುರ್ಮಾಸ್ಯ ಸಮಾರೋಪ ನಾಳೆ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಪಡುಕುತ್ಯಾರು ಶ್ರೀ ಸರಸ್ವತಿ ಸತ್ಸಂಗ ಮಂದಿರದಲ್ಲಿ ಬೆಳಿಗ್ಗೆ 6 ಗಂಟೆಗೆ ವಿಶ್ವಕರ್ಮ ಯಜ್ಞ, 7.30ಕ್ಕೆ ಸೀಮೋಲ್ಲಂಘನೆ, 9.30ಕ್ಕೆ ಗೋಪೂಜೆ, ಶ್ರೀ ಗುರುಪಾದುಕಾ ಪೂಜೆ, 11.30ಕ್ಕೆ ಧಾರ್ಮಿಕ ಸಭೆ ಸಮಾರೋಪ ನಡೆಯಲಿದ್ದು, ಶ್ರೀಗಳು ಆಶೀರ್ವಚನ ನೀಡುವರು. ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ಅಧ್ಯಕ್ಷತೆ ಹಲವು ಗಣ್ಯರು ಉಪಸ್ಥಿತರಿರುವರು.

You cannot copy contents of this page