13ರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪಿಗೆ 125 ವರ್ಷ ಸಜೆ, ದಂಡ

ಕಾಸರಗೋಡು: ಹದಿಮೂರರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ ಕಾಸರಗೋಡು ಫಾಸ್ಟ್ ಟ್ರಾಕ್ ಸ್ಪೆಷಲ್ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ರಾದ ರಾಮು ರಮೇಶ್‌ಚಂದ್ರ ಭಾನು ಅವರು ವಿವಿಧ ಸೆಕ್ಷನ್ ಗಳಲ್ಲಾಗಿ ಒಟ್ಟು 125ವರ್ಷ ಕಠಿಣ ಸಜೆ ಹಾಗೂ ಐದು ಲಕ್ಷ ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ.

ಕೂಡ್ಲು ಕಾನತ್ತಿಂಗರೆ ನಿವಾಸಿ ಸುಬ್ಬ (61) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿ ದ್ದಲ್ಲಿ ಆರೋಪಿ 25 ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆ ಎಂದೂ ತೀರ್ಪಿನಲ್ಲಿ ತಿಳಿಸಲಾಗಿದೆ.

125 ವರ್ಷಗಳ ಸಜೆಯನ್ನು ಆರೋಪಿ ಒಟ್ಟಿಗೆ ಅನುಭವಿಸಿದರೆ ಸಾಕೆಂದು ತೀರ್ಪಿನಲ್ಲಿ ತಿಳಿಸಲಾಗಿದೆ. ಇದರಿಂದಾಗಿ ಆರೋಪಿ ಒಟ್ಟು 25 ವರ್ಷಗಳ ಸಜೆ ಅನುಭವಿಸಬೇಕಾಗಿ ಬರಲಿದೆ.

2021ರಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾರಂಭಿಸಿತ್ತೆಂದೂ, ಆಗ ಆಕೆಗೆ ಹನ್ನೊಂದು ವರ್ಷವಾಗಿತ್ತು. ನಂತರದ ಎರಡು ವರ್ಷಗಳ ತನಕ ವಿವಿಧ ದಿನಗಳಲ್ಲಾಗಿ ಇತರ ಆರೋ ಪಿಗಳೂ ಸೇರಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದರೆಂದು ಪೊಲೀಸರು ದಾಖಲಿಸಿದ ಪ್ರಕರಣದಲ್ಲಿ ತಿಳಿಸಲಾಗಿದೆ. ಈ ಪ್ರಕರಣದಲ್ಲಿ ಒಟ್ಟು ಎಂಟು ಮಂದಿ ಆರೋಪಿಗಳಿದ್ದಾರೆ. ಇತರ ಆರೋಪಿ ಗಳ ಮೇಲಿನ ಕೇಸುಗಳ ವಿಚಾರಣೆ ಪ್ರತ್ಯೇಕ ಪ್ರತ್ಯೇಕವಾಗಿ ನಡೆಯುತ್ತಿದೆ.

ಆರೋಪಿ ಸುಬ್ಬ ಈ ಹಿಂದೆ ಉಳಿಯತ್ತಡ್ಕದಲ್ಲಿ ಗೂಡಂಗಡಿ ನಡೆಸುತ್ತಿದ್ದನು. ಆಗ ಬಾಲಕಿಗೆ ಮಿಠಾಯಿ, ಪಪ್ಪಾಯಿ ನೀಡುವುದಾಗಿ  ಹೇಳಿ ಆಕೆಯನ್ನು ಕರೆದೊಯ್ದು ಲೈಂಗಿಕ ಕಿರುಕುಳ ನೀಡಿರುವುದಾಗಿ ಪೊಲೀಸ್ ಕೇಸಿನಲ್ಲಿ ತಿಳಿಸಲಾಗಿದೆ.

ಈ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಚೈಲ್ಡ್‌ಲೈನ್‌ಗೆ ಮಾಹಿತಿ ಲಭಿಸಿತ್ತು. ಅದರಂತೆ ಚೈಲ್ಡ್‌ಲೈನ್‌ನವರು ಬಾಲಕಿಯ ಹೇಳಿಕೆ ದಾಖಲಿಸಿಕೊಂಡಿದ್ದರು. ನಂತರ ಆ ಬಗ್ಗೆ ನೀಡಲಾದ ದೂರಿನಂತೆ ಕಾಸರಗೋಡು ಮಹಿಳಾ ಪೊಲೀಸರು ಪೋಕ್ಸೋ ಕಾನೂನು ಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದರು. ಅಂದು ಕಾಸರಗೋಡು ಮಹಿಳಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಿ. ಭಾನುಮತಿ ಈ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರೋಸಿಕ್ಯೂಷನ್ ಪರ ಸ್ಪೆಷಲ್ ಪಬ್ಲಿಕ್ ಪ್ರೋಸಿಕ್ಯೂಟರ್ ಎ.ಕೆ. ಪ್ರಿಯಾ ನ್ಯಾಯಾಲಯದಲ್ಲಿ ವಾದಿಸಿದ್ದರು.

Leave a Reply

Your email address will not be published. Required fields are marked *

You cannot copy content of this page