ಪ್ರೆಸ್‌ಕ್ಲಬ್‌ನ ನವೀಕೃತ ಕಟ್ಟಡ ಅ.5ರಂದು ಮುಖ್ಯಮಂತ್ರಿ ಉದ್ಘಾಟನೆ

ಕಾಸರಗೋಡು: ಜಿಲ್ಲೆಯಲ್ಲಿ ವಿವಿಧೆಡೆಗಳಲ್ಲಿ ಹಮ್ಮಿಕೊಳ್ಳ ಲಾಗಿರುವ ವಿವಿಧ ಕಾರ್ಯಕ್ರಮ ಗಳನ್ನು ಅಕ್ಟೋಬರ್ 5ರಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆನ್‌ಲೈನ್ ಮೂಲಕ ಉದ್ಘಾಟಿಸುವರು. ಇದರಂತೆ ಕಾಸರಗೋಡು ಪ್ರೆಸ್‌ಕ್ಲಬ್‌ನ ನವೀಕೃತ ಕಟ್ಟಡದ ಉದ್ಘಾಟನೆ ಯನ್ನು ಅಂದು ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಆನ್‌ಲೈನ್ ಮೂಲಕ ಉದ್ಘಾಟಿಸು ವರು. ರಾಜ್ಯ ಲೋಕೋಪಯೋಗಿ ಪ್ರವಾಸೋದ್ಯಮ ಖಾತೆ ಸಚಿವ ಮೊಹಮ್ಮದ್ ರಿಯಾಸ್ ಅಧ್ಯಕ್ಷತೆ ವಹಿಸುವರು.

ಸಂಸದ ರಾಜ್‌ಮೋಹನ್ ಉಣ್ಣಿತ್ತಾನ್, ಜಿಲ್ಲೆಯ ಶಾಸಕರಾದ ಎನ್.ಎ. ನೆಲ್ಲಿಕುನ್ನು, ಇ. ಚಂದ್ರಶೇ ಖರನ್, ಸಿ.ಎಚ್. ಕುಂಞಂಬು, ಎಂ. ರಾಜಗೋಪಾ ಲನ್, ಎ.ಕೆ.ಎಂ. ಅಶ್ರಫ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪಿ. ಬೇಬಿ ಬಾಲಕೃಷ್ಣನ್ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಬಳಿಕ ಮಾಧ್ಯಮ ವಿಚಾರಗೋಷ್ಠಿ ಯೂ ನಡೆಯಲಿದೆ.

RELATED NEWS

You cannot copy contents of this page