ನಾಡಿನಾದ್ಯಂತ ಕ್ಷೇತ್ರಗಳಲ್ಲಿ ನವರಾತ್ರಿ ಮಹೋತ್ಸವ ಆರಂಭ
ಕಾಸರಗೋಡು: ನಾಡಿನಾದ್ಯಂತ ದೇವಸ್ಥಾ ಗಳಲ್ಲಿ ನವರಾತ್ರಿ ಮಹೋತ್ಸವ ಇಂದಿನಿಂದ ಭಕ್ತಿ ಸಡಗರದೊಂದಿಗೆ ಆರಂಭಗೊಂಡಿದೆ. ಇದರ ಅಂಗವಾಗಿ ಮುಂದಿನ ಒಂಭತ್ತು ದಿನಗಳ ಕಾಲ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಕಾಸರಗೋಡು ಪೇಟೆ ಶ್ರೀ ವೆಂಕಟ್ರಮಣ ಕ್ಷೇತ್ರ, ಅಣಂಗೂರು ಶ್ರೀ ಶಾರದಾಂಬಾ ಭಜನಾ ಮಂದಿರ, ಕೊರಕೋಡು ಶ್ರೀ ಆರ್ಯಕಾತ್ಯಾಯಿನಿ ಮಹಾದೇವಿ ಕ್ಷೇತ್ರ, ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ, ಮಲ್ಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ, ಆದೂರು ಶ್ರೀ ಭಗವತೀ ಕ್ಷೇತ್ರ, ಬಂಗ್ರಮಂಜೇಶ್ವರ ಶ್ರೀ ಕಾಳಿಕಾಪರಮೇಶ್ವರಿ ಕ್ಷೇತ್ರ, ತಾಯತೊಟ್ಟಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ, ಮಂಗಲ್ಪಾಡಿ ಏಕಾಹ ಭಜನಾ ಮಂದಿರ, ಮುಳಿಯಾರು ಕುಂಜರಕಾನ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ, ಕಾಳ್ಯಂಗಾಡು ಶ್ರೀ ಮೂಕಾಂಬಿಕಾ ಕ್ಷೇತ್ರ, ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ, ಮೀಪುಗುರಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ, ತೂಮಿನಾಡು ಶ್ರೀ ಮಹಾಕಾಳಿ ಭಜನಾ ಮಂದಿರ, ಕೊಲ್ಯ ಮಠ ಶ್ರೀ ದೇವಿ ಮೂಕಾಂಬಿಕಾ ದೇವಸ್ಥಾನ, ಚಿಪ್ಪಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಪಾವೂರು ಪೊಯ್ಯೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಬಜಕೂಡ್ಲು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ಸಹಿತ ನಾಡಿನಾದಂತವಾಗಿ ಹಲವಾರು ಕ್ಷೇತ್ರಗಳಲ್ಲಿ ನವರಾತಕ್ರಿ ಮಹೋತ್ಸವ ಆಚರಿಸಲಾಗುವುದು.