ಹಿತ್ತಿಲಲ್ಲಿ ಬಚ್ಚಿಡಲಾಗಿದ್ದ ಕರ್ನಾಟಕ ಮದ್ಯ ವಶ

ಕಾಸರಗೋಡು: ಚೆರ್ಕಳದ ಜನವಾಸವಿಲ್ಲದ ಪ್ರದೇಶದಲ್ಲಿ ಅಕ್ರಮವಾಗಿ ಬಚ್ಚಿಡಲಾಗಿದ್ದ 180 ಎಂಎಲ್‌ನ 35 ಪ್ಯಾಕೆಟ್ ಕರ್ನಾಟಕ ಮದ್ಯ (6.84 ಲೀಟರ್)ನ್ನು ಕಾಸರ ಗೋಡು ಅಬಕಾರಿ ರೇಂಜ್ ಕಚೇರಿಯ ಇನ್‌ಸ್ಪೆಕ್ಟರ್ ಜೋಸೆಫ್ ಜೆ ನೇತೃತ್ವದ ತಂಡ ನಿನ್ನೆ ನಡೆಸಿದ ಶೋಧ ಕಾರ್ಯಾ ಚರಣೆಯಲ್ಲಿ ಪತ್ತೆಹಚ್ಚಿ ವಶಪಡಿಸಿಕೊಂ ಡಿದೆ.  ಈ ಕಾರ್ಯಾಚರಣೆ ನಡೆಸಿದ ಅಬಕಾರಿ ತಂಡದಲ್ಲಿ ಸಿವಿಲ್ ಎಕ್ಸೈಸ್ ಆಫೀಸರ್‌ಗಳಾದ ಅಬ್ದುಲ್ ಅಸೀಸ್, ಸಜಿತ್ ಕುಮಾರ್ ಮತ್ತು ಅನುರಾಗ್  ಎಂಬವರು ಒಳಗೊಂಡಿದ್ದರು.

You cannot copy contents of this page