ಬಾಡಿಗೆ ಮನೆಯಲ್ಲಿ ವ್ಯಕ್ತಿ ನೇಣು ಬಿಗಿದು ಸಾವು

ಪೈವಳಿಕೆ: ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ವ್ಯಕ್ತಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುರುಡಪದವಿನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಶೋಕ್ (40) ಎಂಬವರು ಸಾವಿಗೀಡಾದ ವ್ಯಕ್ತಿಯಾಗಿದ್ದಾರೆ. ಇವರು ಸುಂಕದಕಟ್ಟೆಯಲ್ಲಿ ಬೈಕ್ ಗ್ಯಾರೇಜ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ೮ ಗಂಟೆ ವೇಳೆ ಅಶೋಕ್ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿರುವುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಸಮೀಪ ವಾಸಿಗಳು ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರು ಸ್ಥಳಕ್ಕೆ ತಲುಪಿ ಪರಿಶೀಲಿಸಿದ್ದು, ಅಷ್ಟರೊಳಗೆ ಸಾವು ಸಂಭವಿಸಿತ್ತೆನ್ನಲಾಗಿದೆ. ಈ ಹಿಂದೆ ವಿಟ್ಲ ಬಳಿಯ ಬೈರಿಕಟ್ಟೆಯಲ್ಲಿ ರುವ ಪತ್ನಿ ಮನೆಯಲ್ಲಿ ವಾಸಿಸುತ್ತಿದ್ದ ಅಶೋಕ್ ಎರಡು ತಿಂಗಳ ಹಿಂದೆ ಕುರುಡಪದವಿನಲ್ಲಿ ವಾಸ ಆರಂಭಿಸಿದ್ದರೆಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

You cannot copy content of this page