ಹದಗೆಟ್ಟು ವಾಹನ ಸಂಚಾರಕ್ಕೆ ಭೀತಿ ಸೃಷ್ಟಿಸುವ ಉಪ್ಪಳ-ಬಾಳ್ಯೂರು ರಸ್ತೆ: ದುರಸ್ತಿಗೆ ಆಗ್ರಹ

ಉಪ್ಪಳ: ಬಾಳ್ಯೂರು-ಉಪ್ಪಳ ಲೋಕೋಪಯೋಗಿ ರಸ್ತೆ ಹದಗೆಟ್ಟು ಶೋಚನೀಯಾವಸ್ಥೆಯಲ್ಲಿದೆ. ಮೀಂಜ ಪಂಚಾಯತ್ ಹಾಗೂ ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಇದೆ. ರಸ್ತೆ ಬದಿ ಚರಂಡಿ ವ್ಯವಸ್ಥಿತವಾಗಿ ಇಲ್ಲದಿರುವುದು ಮಳೆ ನೀರು ರಸ್ತೆಯಲ್ಲೇ ಹರಿಯುವಂತಾಗಿದೆ. ಇದರಿಂದಾಗಿ ರಸ್ತೆಯ ಡಾಮರು, ಜಲ್ಲಿ ನೀರಿನೊಂದಿಗೆ ಕೊಚ್ಚಿ ಹೋಗಿದ್ದು, ಅಲ್ಲಲ್ಲಿ ಹೊಂಡ ಸೃಷ್ಟಿಯಾಗಿದೆ. ವಾಹ ನ ಸಂಚಾರ ಭೀತಿಯುಕ್ತವಾಗಿದೆ.

ರಸ್ತೆ ದುರಸ್ತಿ ಗೊಳಿಸಲು ಊರವರ ಪರವಾಗಿ ಕಾಂಗ್ರೆಸ್‌ನ ಮುಖಂಡ ಕಂಚಿಲ ಮೊಹಮ್ಮದ್ ಹಾಜಿ, ಶಾಸಕ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮನವಿ ನೀಡಿದ್ದಾರೆ. ಆದರೂ ಇದುವರೆಗೂ ಯಾವುದೇ ಕ್ರಮ ಉಂಟಾಗಲಿಲ್ಲ. ಶೀಘ್ರವೇ ರಸ್ತೆ ದುರಸ್ತಿಗೊಳಿಸದಿದ್ದರೆ ಊರವರು ಒಟ್ಟಾಗಿ ಹೋರಾಟಕ್ಕೆ ಮುಂದಾಗುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

RELATED NEWS

You cannot copy contents of this page