ಯುವಕ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ
ಪೆರ್ಲ: ನಾಪತ್ತೆಯಾಗಿದ್ದ ಯುವಕನೋರ್ವ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಾಟುಕುಕ್ಕೆ ದಂಬೆಕಾನ ನಿವಾಸಿ ರಾಧಾಕೃಷ್ಣ (42) ಮೃತಪಟ್ಟ ವ್ಯಕ್ತಿ. ಕೂಲಿ ಕಾರ್ಮಿಕನಾಗಿದ್ದ ಇವರು ಮೊನ್ನೆ ಸಂಜೆ ೫ ಗಂಟೆ ಬಳಿಕ ನಾಪತ್ತೆಯಾಗಿದ್ದರು. ಅಂದು ರಾತ್ರಿ ಮನೆಯವರು ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ನಿನ್ನೆ ಬೆಳಿಗ್ಗೆ ಹುಡುಕಾಟ ಪುನರಾರಂಭಿಸಿದಾಗ ಮನೆ ಹಿತ್ತಿಲಲ್ಲಿ ಮರಕ್ಕೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮನೆಗೆ ಕೊಂಡೊಯ್ದು ಅಂತ್ಯ ಸಂಸ್ಕಾರ ನಡೆಸಲಾಯಿತು.
ದಿವಂಗತರಾದ ಚೋಮ-ಕಲ್ಯಾಣಿ ದಂಪತಿಯ ಪುತ್ರನಾದ ಮೃತರು ಸಹೋದರ ಮಂಜುನಾಥ, ಸಹೋದರಿ ನೇತ್ರಾವತಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.