ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಇಬ್ಬರು ಆರೋಪಿಗಳಿಗೆ 32,34 ವರ್ಷ ಕಠಿಣ ಸಜೆ
ಕಾಸರಗೋಡು: 15ರ ಹರೆಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಇಬ್ಬರು ಆರೋಪಿಗಳಿಗೆ ಕಾಸರಗೋಡು ಫಾಸ್ಟ್ ಟ್ರಾಕ್ ವಿಶೇಷ ನ್ಯಾಯಾಲ ಯದ ನ್ಯಾಯಾಧೀಶರಾದ ರಾಮು ರಮೇಶ್ಚಂದ್ರಭಾನು ಅವರು ವಿವಿಧ ಸೆಕ್ಷನ್ಗಳಲ ಪ್ರಕಾರ ಒಟ್ಟು ತಲಾ 32 ಮತ್ತು 34 ವರ್ಷದಂತೆ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ. ಈ ಪ್ರಕರಣದ ಓರ್ವ ಆರೋಪಿ ಕಡಂಬಾರು ಚಿಗುರುಪಾದೆ ಹೌಸ್ನ ಸಂದೇಶ್ (ನಂದೇಶ್ 34)ನಿಗೆ 32 ವರ್ಷ ಕಠಿಣ ಸಜೆ ಹಾಗೂ ನಾಲ್ಕು ಲಕ್ಷ ರೂ. ಜುಲ್ಮಾನೆ ವಿಧಿಸಲಾಗಿದೆ. ಇನ್ನೋರ್ವ ಆರೋಪಿ ವಾಹನ ಚಾಲಕ ಕುಳೂರು ಮಜಾರ್ ಹೌಸ್ನ ನವೀನ್ ಕುಮಾರ್ ಶೆಟ್ಟಿ (34)ನಿಗೆ 34 ವರ್ಷ ಕಠಿಣ ಸಜೆ ಹಾಗೂ 4 ಲಕ್ಷರೂ. ಜುಲ್ಮಾನೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿಗಳು ತಲಾ 1-4 ವರ್ಷ ಹೆಚ್ಚುವರಿ ಸಜೆ ಅನುಭವಿಸಬೇಕಾಗಿ ದೆಯೆಂದೂ ತೀರ್ಪಿನಲ್ಲಿ ತಿಳಿಸಲಾಗಿದೆ.
ಪರಿಚಯ ಹೊಂದಿದAತೆ 15ರ ಹರೆಯದ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರು ಈ ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೋ ಕಾನೂನು ಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದರು. ಅಂದು ಮಂಜೇಶ್ವರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಪಿ. ಅನೂಪ್ ಪ್ರಕರಣದ ಬಗ್ಗೆ ಮೊದಲು ತನಿಖೆ ನಡೆಸಿದ್ದರು. ನಂತರ ಅಂದು ಎಸ್ಎಂಎಸ್ ಡಿವೈಎಸ್ಪಿಯಾಗಿದ್ದ ಹರಿಶ್ಚಂದ್ರ ನಾಯ್ಕ ಮುಂದಿನ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರೋಸಿಕ್ಯೂಶನ್ ಪರ ಸ್ಪೆಷಲ್ ಪಬ್ಲಿಕ್ ಪ್ರೋಸಿಕ್ಯೂಟರ್ ಎ.ಕೆ. ಪ್ರಿಯಾ ನ್ಯಾಯಾಲಯದಲ್ಲಿ ವಾದಿಸಿದ್ದರು.