ಆತ್ಮಹತ್ಯೆಗೆ ಯತ್ನಿಸಿದ ನರ್ಸಿಂಗ್ ವಿದ್ಯಾರ್ಥಿನಿಯ ಸ್ಥಿತಿ ಗಂಭೀರ
ಕಾಸರಗೋಡು: ಹಾಸ್ಟೆಲ್ ವಾರ್ಡನ್‌ನ ಮಾನಸಿಕ ಪೀಡನೆ ಯಿಂದಾಗಿ ಆತ್ಮಹತ್ಯೆಗೆತ್ನಿಸಿದ ನರ್ಸಿಂಗ್ ವಿದ್ಯಾರ್ಥಿನಿಯ ಆರೋ ಗ್ಯ ಗಂಭೀರ ಸ್ಥಿತಿಯಲ್ಲಿ ಮುಂದು ವರಿಯುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯನ್ನು ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ದಶಂಬರ್ ೮ರಂದು ಕಾಞಂಗಾಡ್ ಅದಿಂ ಞಾಲ್‌ನಲ್ಲಿರುವ ಮನ್ಸೂರ್ ಆಸ್ಪತ್ರೆಯ ಮೂರನೇ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಗೆತ್ನಿಸಿದ್ದಳು. ಕೂಡಲೇ ಪ್ರಾಥಮಿಕ ಶುಶ್ರೂಷೆ ನೀಡಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಐಸಿಯೂವಿನ ಸಹಾಯದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆದರೆ ಯಾವುದೇ ಪ್ರಗತಿ ಕಂಡು ಬಾರದ ಹಿನ್ನೆಲೆಯಲ್ಲಿ ಬಳಿಕ ಕೆಎಂಸಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿಯೂ ಚಿಕಿತ್ಸೆಯಲ್ಲಿ ಆರೋಗ್ಯ ಸ್ಥಿತಿ ಉತ್ತಮಗೊಳ್ಳದ ಹಿನ್ನೆಲೆಯಲ್ಲಿ ಈಗ ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ವಿದ್ಯಾರ್ಥಿನಿಯ ಆತ್ಮಹತ್ಯಾ ಯತ್ನ ಕಾಞಂಗಾಡ್‌ನಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿತ್ತು.