ಉಳ್ಳಾಲ: ವಾಹನ ಅಪಘಾತ; ಓರ್ವ ಸಾವು
ಮಂಜೇಶ್ವರ: ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಸಂಕೊಲಿಗೆ ಬಳಿ ನಿನ್ನೆ ತಡರಾತ್ರಿ ಲಾರಿ ಢಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ದೇರಳಕಟ್ಟೆ ಸಮೀಪದ ಪನೀರ್ ನಿವಾಸಿ ಅಝರ್ ಎಂದು ಗುರುತಿಸಲಾಗಿದೆ. ಅವರು ಸ್ಕೂಟರ್‌ನಲ್ಲಿ ಮಂಜೇಶ್ವರದತ್ತ ಸಂಚರಿಸುತ್ತಿದ್ದ ದಾರಿ ಮಧ್ಯೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಉಳ್ಳಾಲ ಪೊಲೀಸರು ತನಿಖೆ ಆರಂಭಿಸಿದ್ದಾರೆ.