ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ ರಾಜ್ಯ ಸಮ್ಮೇಳನ

ಕಾಸರಗೋಡು: ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ರಾಜ್ಯ ಸಮ್ಮೇಳನ ಕಾಸರಗೋಡು ನಗರಸಭಾ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ಆರಂಭಗೊಂಡಿತು. ಸಂಘಟನೆಯ ನೇತಾರರ ಸಹಿತ ಹಲವರು ಭಾಗವಹಿಸುತ್ತಿದ್ದಾರೆ. ಮಧ್ಯಾಹ್ನ 1.30ರಿಂದ ವಿಚಾರಗೋಷ್ಠಿ, ಅಪರಾಹ್ನ 3.30ರಿಂದ ಅಧ್ಯಾಪಕರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿರುವುದು. ನಾಳೆ ಬೆಳಿಗ್ಗೆ 9.30ಕ್ಕೆ ವಿದಾಯಕೂಟ ಸಮಾರಂಭ ನಡೆಯಲಿದ್ದು, ವಿಶ್ರಾಂತ ಉಪನ್ಯಾಸಕ ಶಿಕಾರುಪುರ ಕೃಷ್ಣಮೂರ್ತಿ ಉದ್ಘಾಟಿಸುವರು.

You cannot copy contents of this page