ಚೇರಾಲಿನಲ್ಲಿ ಕಾಂಗ್ರೆಸ್‌ನಿಂದ ಮಹಾತ್ಮಾಗಾಂಧಿ ಕುಟುಂಬ ಸಂಗಮ

ಬಾಯಾರು: ಗಾಂಧೀಜಿ ಕನಸು ಕಂಡ ಗ್ರಾಮ ಸ್ವರಾಜ್ಯದ ಸಂಕಲ್ಪವನ್ನು ನನಸಾಗಿಸಲು ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನು ಸಿದ್ಧನಾಗಬೇಕು. ಈ ನಿಟ್ಟಿನಲ್ಲಿ ಮುಂಬರುವ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಗೆ ಮಹತ್ವವಿದೆ ಎಂದು  ಕುಂಬಳೆ ಬ್ಲೋಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಲಕ್ಷ್ಮಣ ಪ್ರಭು ನುಡಿದರು. ಪೈವಳಿಕೆ ಪಂಚಾಯತ್ ೯ನೇ ವಾರ್ಡ್ ಚೇರಾಲಿನಲ್ಲಿ ನಡೆದ ಮಹಾತ್ಮಾಗಾಂಧಿ ಕುಟುಂಬ ಸಂಗಮ ಉದ್ಘಾಟಿಸಿ ಅವರು ಮಾತನಾಡಿದರು. ಮಂಡಲ ಕಾಂಗ್ರೆಸ್ ಅಧ್ಯಕ್ಷ ವಸಂತ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಬ್ಲೋಕ್ ಕಾಂಗ್ರೆಸ್ ಕಾರ್ಯದರ್ಶಿ ರಾಘವೇಂದ್ರ ಭಟ್ ಮಾತನಾಡಿದರು. ಉಪಾಧ್ಯಕ್ಷ ನಾರಾಯಣ ಏದಾರ್ ಶುಭ ಕೋರಿದರು. ಅಬ್ದುಲ್ಲ ಹಾಜಿ, ಗಂಗಾಧರ ನಾಯ್ಕ್, ಕುಂಞಂಣ್ಣ ನಾಯ್ಕ್, ಯೂಸುಫ್ ಚೇರಾಲ್ ಉಪಸ್ಥಿತರಿದ್ದರು. ವಾರ್ಡ್ ಕಾರ್ಯದರ್ಶಿ ಅಬ್ದುಲ್ ರಜಾಕ್ ಸ್ವಾಗತಿಸಿ, ಮಂಡಲ ಕಾರ್ಯದರ್ಶಿ ಶಿವರಾಮ ಶೆಟ್ಟಿ ವಂದಿಸಿದರು.

RELATED NEWS

You cannot copy contents of this page