15ರ ಹರೆಯದ ಬಾಲಕಿ ನಾಪತ್ತೆ ಪ್ರಕರಣ: ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಕೆ

ಕುಂಬಳೆ: ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾದ 15ರ ಹರೆಯದ ಬಾಲಕಿ ನಾಪತ್ತೆಯಾಗಿ ಒಂದು ತಿಂಗಳಾಗುತ್ತಾ ಬಂದರೂ ಆಕೆಯ ಕುರಿತಾಗಿ ಇದುವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಬಾಲಕಿಯ ತಾಯಿ ನ್ಯಾಯವಾದಿ ಮುಖಾಂತರ  ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಫೆಬ್ರವರಿ 12ರಂದು ಮುಂಜಾನೆಯಿಂದ ಬಾಲಕಿ ನಾಪತ್ತೆಯಾಗಿ ದ್ದಾಳೆ. ಈ ಬಗ್ಗೆ ಲಭಿಸಿದ ದೂರಿನಂತೆ ಕುಂಬಳೆ ಪೊಲೀಸರು ಕೇಸು ದಾಖಲಿಸಿ ವಿವಿಧೆಡೆ ಶೋಧ ನಡೆಸಿದರೂ ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಬಾಲಕಿಯನ್ನು ಪತ್ತೆಹಚ್ಚಲು ಇನ್‌ಸ್ಪೆಕ್ಟರ್ ಕೆ.ಪಿ. ವಿನೋದ್ ಕುಮಾರ್ ನೇತೃತ್ವದಲ್ಲಿ ಪೊಲೀಸರ ಮೂರು ತಂಡಗಳು ವಿವಿಧೆಡೆ ಶೋಧ ನಡೆಸುತ್ತಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

You cannot copy contents of this page