ರಿಕ್ಕಿ ರೈ ವಿರುದ್ಧ ಗುಂಡಿನ ದಾಳಿ: ಮುತ್ತಪ್ಪ ರೈ ದ್ವಿತೀಯ ಪತ್ನಿ ಅನುರಾಧಾ ರೈ ಅಮೆರಿಕಕ್ಕೆ ಪರಾರಿ

ಬೆಂಗಳೂರು: ಮುತ್ತಪ್ಪ ರೈಯವರ ಪುತ್ರ ರಿಕ್ಕಿ ರೈ ವಿರುದ್ಧ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿ ದ್ವಿತೀಯ ಆರೋಪಿಯಾಗಿರುವ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧ ರೈ ಅಮೆರಿಕಕ್ಕೆ ತೆರಳಿರುವುದಾಗಿ ತಿಳಿದು ಬಂದಿದೆ. ರಿಕ್ಕಿ ರೈ ಅವರ ಕಾರು ಚಾಲಕ ಬಸವರಾಜು ನೀಡಿದ ದೂರಿನ ಆಧಾರದ ಮೇಲೆ ಬಿಡದಿ ಪೊಲೀಸ್ ಠಾಣೆಯಲ್ಲಿ ಅನುರಾಧಾ ರೈ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ತನಿಖೆಯಂಗವಾಗಿ ಪೊಲೀಸರು ಅನುರಾಧಾ ರೈಗೆ ನೋಟೀಸು ನೀಡಲು ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಆದರೆ ಅನುರಾಧಾ ರೈ ಆ ಮನೆಯನ್ನು ಅಮೆರಿಕ ಮೂಲದ ವ್ಯಕ್ತಿಗೆ ಮಾರಾಟ ಮಾಡಿ ಈ ತಿಂಗಳ ೧೪ರಂದೇ ಅಮೆರಿಕಕ್ಕೆ ತೆರಳಿರುವುದಾಗಿ ತಿಳಿದು ಬಂದಿದೆ.

ಮೊಬೈಲ್ ಲೊಕೇಶನ್ ಪರಿಶೀಲನೆಯಿಂದಲೂ ಈ ಮಾಹಿತಿ ದೃಢ ಪಟ್ಟಿದೆ. ಇದೇ ವೇಳೆ ರಿಕ್ಕಿ ರೈ ಮೇಲೆ ಕಳೆದ ಶುಕ್ರವಾರ ಬಿಡದಿ ಸಮೀಪ ನಡೆದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ  ತನ್ನ ವಿರುದ್ಧ ದಾಖಲಾದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಅನುರಾಧಾ ರೈ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆಯೂ ತನಿಖೆ ನಡೆಸಲಾಗುತ್ತಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED NEWS

You cannot copy contents of this page