ಮಕ್ಕಳಿಗೆ ಸನಾತನ ಸಂಸ್ಕೃತಿ ಅರಿವು ಮೂಡಿಸಬೇಕು-ಡಾ| ಸುಮತಿ ನಾಯಕ್
ಕಾಸರಗೋಡು: ಹಬ್ಬಗಳ ಆಚರಣೆ ಮೂಲಕ ಸನಾತನ ಸಂಸ್ಕೃತಿ, ಆಚಾರ, ವಿಚಾರಗಳನ್ನು ಉಳಿಸಿ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಈ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಉತ್ಸವಗಳಲ್ಲಿ ಭಾಗವಹಿಸುವುದು ಹಿಂದೆAದಿಗಿAತ ಇಂದು ಹೆಚ್ಚು ಅಗತ್ಯ ವಾಗಿದೆ. ಒಗ್ಗೂಡಿ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಬಲಿಷ್ಠವಾದ ಭಾರತ ನಿರ್ಮಾಣ ಸಾಧ್ಯ ಎಂದು ಖ್ಯಾತ ನೇತ್ರ ತಜ್ಞೆ ಡಾ|ಸುಮತಿ ನಾಯಕ್ ಹೇಳಿದರು.
ಅವರು ಕೋಟೆಕಣಿಯ ಶ್ರೀ ರಾಮನಾಥ ಸಾಂಸ್ಕೃತಿಕ ಭವನ ಸಮಿತಿಯ ನೇತೃತ್ವದಲ್ಲಿ ಪಾರೆಕಟ್ಟೆಯ ಕನ್ನಡ ಗ್ರಾಮದಲ್ಲಿ ಆಯೋಜಿಸಿದ ಕಾಸರಗೋಡು ದಸರಾ ಕಾರ್ಯಕ್ರಮ ವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಹಿರಿಯ ಸಾಹಿತಿ, ರಾಧಾಕೃಷ್ಣ ಕೆ.ಉಳಿಯತ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಮಧೂರು ಪಂಚಾಯತ್ ಅಧ್ಯಕ್ಷ ಕೆ.ಗೋಪಾಲಕೃಷ್ಣ ಮುಖ್ಯ ಅತಿಥಿ ಯಾಗಿ ಭಾಗವಹಿಸಿದರು. ದಸರಾ ಮಹತ್ವದ ಬಗ್ಗೆ ಸಂಘಟಕ ಜಗದೀಶ್ ಕೂಡ್ಲು ಉಪನ್ಯಾಸ ನೀಡಿದರು. ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಶಿವರಾಮ ಕಾಸರಗೋಡು, ಕಾಸರ ಗೋಡು ನಗರಸಭಾ ಸದಸ್ಯೆ ಶಾರದಾ ಭಾಗವಹಿಸಿದರು. ಈ ಸಂದರ್ಭದಲ್ಲಿ ಸಮಾಜ ಸೇವಕ ಎಸ್.ಕುಮಾರ್ ಅವರಿಗೆ ದಸರಾ ಗೌರವ ನೀಡಲಾ ಯಿತು. ಸಾಂಸ್ಕೃತಿಕ ಕಾರ್ಯಕ್ರಮ ದಂಗವಾಗಿ ಜಗದೀಶ್ ಶಿವಪುರ ಅವರಿಂದ ಭಾವಗಾನ ವೈಭವ ಹಾಗು ಸ್ಥಳೀಯ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು. ಶ್ರೀ ರಾಮನಾಥ ಸಾಂಸ್ಕೃತಿಕ ಭವನ ಸಮಿತಿಯ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೋಟೆಕಣಿ ಪ್ರಾಸ್ತಾವಿಕ ನುಡಿದರು. ನಗರಸಭಾ ಮಾಜಿ ಸದಸ್ಯ ಶಂಕರ ಕೆ. ಸ್ವಾಗತಿಸಿದರು. ನಿಶ್ಮಿತಾ ಮಿಥುನ್ ಕಾರ್ಯಕ್ರಮ ನಿರೂಪಿಸಿ ದರು. ಪ್ರತಿಜ್ಞಾ ರಂಜಿತ್ ಪ್ರಾರ್ಥನೆ ಹಾಡಿದರು. ಗ್ರೀಷ್ಮಾ ವಂದಿಸಿದರು.