ಅನಧಿಕೃತ ಹೊಯ್ಗೆ ಸಂಗ್ರಹ: 2 ದೋಣಿಗಳ ನಾಶ

ಕುಂಬಳೆ: ಆರಿಕ್ಕಾಡಿ ಕಡವತ್‌ನಲ್ಲಿ ಅನಧಿಕೃತವಾಗಿ ಹೊಯ್ಗೆ ಸಂಗ್ರಹ ನಡೆಸುತ್ತಿದ್ದ ಎgಡು ದೋಣಿಗಳನ್ನು ಪೊಲೀಸರು ನಾಶಗೊಳಿಸಿದ್ದಾರೆ. ನಿನ್ನೆ ರಾತ್ರಿ ದೋಣಿಗಳನ್ನು ನಾಗರಿಕರು ವಶಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದರಂತೆ ಕೂಡಲೇ ತಲುಪಿದ ಪೊಲೀಸರು ದೋಣಿಗಳನ್ನು ಜೆಸಿಬಿ ಬಳಸಿ ನಾಶಗೊಳಿಸಿದ್ದಾರೆ. ಇದೇ ವೇಳೆ ವಳಯಂನಿಂದ ಅನಧಿಕೃತವಾಗಿ ಸಂಗ್ರಹಿಸಿದ ಹೊಯ್ಗೆ ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಬಂದ್ಯೋಡಿನಿಂದ ಇನ್‌ಸ್ಪೆಕ್ಟರ್ ಕೆ.ಪಿ. ವಿನೋದ್ ಕುಮಾರ್ ವಶಪಡಿಸಿಕೊಂಡಿದ್ದಾರೆ. ಲಾರಿಯ ಚಾಲಕ ಪಾವೂರು ನಿವಾಸಿ ಅಬೂಲ್ ನಿಶಾನ್ (33) ಎಂಬಾತನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

You cannot copy contents of this page