ಬಾಲಕಿಗೆ ಲೈಂಗಿಕ ಕಿರುಕುಳ: ಯುವಕ ಸೆರೆ
ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಪ್ರಕರಣದ ಆರೋಪಿಯಾಗಿರುವ ಯುವಕನನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.
ಚೆಂಗಳ ಸಂತೋಷ್‌ನಗರದ ಮೊಹಮ್ಮದ್ ಅಜ್ಮಲ್ (24) ಬಂಧಿತ ಆರೋಪಿ. ವಿದ್ಯಾನಗರ ಠಾಣೆ ವ್ಯಾಪ್ತಿಗೊಳಪಟ್ಟ ಪ್ರದೇಶದ 17ರ ಹರೆಯದ ಬಾಲಕಿಗೆ ಪ್ರೀತಿಯ ಹೆಸರಲ್ಲಿ ನಾಲ್ಕು ತಿಂಗಳ ಹಿಂದೆ ಲೈಂಗಿಕ ಕಿರುಕುಳ ನೀಡಿ ಅದರ ಪರಿಣಾಮ ಆಕೆ ಗರ್ಭಿಣಿ ಯಾಗಿ ರುವುದಾಗಿ ಆರೋಪಿಸಿ ಆ ಬಾಲಕಿ ನೀಡಿದ ದೂರಿನಂತೆ ಆರೋಪಿಯ ವಿರುದ್ಧ ವಿದ್ಯಾನಗರ ಪೊಲೀಸರು ಪೋಕ್ಸೋ ಕಾನೂನು ಪ್ರಕಾರ ಕೇಸು ದಾಖಲಿಸಿ ಅದಕ್ಕೆ ಸಂಬಂಧಿಸಿ ಆತನನ್ನು ಬಂಧಿಸಿದ್ದಾರೆ.