ಕೂಲಿ ಕಾರ್ಮಿಕ ನೇಣುಬಿಗಿದು ಆತ್ಮಹತ್ಯೆ

ಮಂಜೇಶ್ವರ: ಕರ್ನಾಟಕ ನಿವಾಸಿ ಕೂಲಿ ಕಾರ್ಮಿಕ ವಾಸಸ್ಥಳದಲ್ಲಿ ನೇಣುಬಿಗಿದು ಆತ್ಮಹತ್ಯೆಗೈದ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಹತ್ತಿಮತ್ತೂರು ನಿವಾಸಿ ಭೀಮಪ್ಪ [40] ಮೃತಪm್ಟ ವರು. ಇವರು ಕಳೆದ ಹಲವು ತಿಂಗಳಿAದ ಮಂಜೇಶ್ವರ ಕಟ್ಟೆಬಜಾರ್ ಬಾಡಿಗೆ ಕ್ವಾರ್ಟರ್ಸ್ನಲ್ಲಿ ಕುಟುಂಬ ದೊಂದಿಗೆ ವಾಸಿಸುತ್ತಿದ್ದರು. ಶುಕ್ರವಾರ ಸಂಜೆ ಯಾರು ಇಲ್ಲದ ವೇಳೆ ಮನೆಯೊಳಗೆ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಊರಿಗೆ ಕೊಂಡೊ ಯ್ಯಲಾಗಿದೆ. ಮೃತರು ಪತ್ನಿ ಗೀತಾ, ಮಕ್ಕಳಾದ ಚೈತ್ರ, ಪವಿತ್ರ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

You cannot copy contents of this page