ಮಂಜೇಶ್ವರದಲ್ಲಿ ಕಿರುಕುಳಕ್ಕೊಳಗಾದ 16ರ ಬಾಲಕಿ ಗರ್ಭಿಣಿ: ಯುವಕನ ವಿರುದ್ಧ ಪೋಕ್ಸೋ ಕೇಸು
ಉಪ್ಪಳ: ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ 16ರ ಹರೆಯದ ಬಾಲಕಿಗೆ ಯುವಕನೋರ್ವ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಲಾಗಿದೆ. ಇದರಿಂದ ಬಾಲಕಿ ಇದೀಗ ಗರ್ಭಿಣಿಯಾಗಿದ್ದಾಳೆ. ಘಟನೆಗೆ ಸಂಬಂಧಿಸಿ ಮುಹಮ್ಮದ್ ಶನೋಜ್ (21) ಎಂಬಾತನ ವಿರುದ್ಧ ಮಂಜೇಶ್ವರ ಪೊಲೀಸರು ಪೋಕ್ಸೋ ಪ್ರಕಾರ ಕೇಸು ದಾಖಲಿಸಿಕೊಂ ಡಿದ್ದಾರೆ. ಆರೋಪಿಯ ಪತ್ತೆಗಾಗಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬಾಲಕಿ ಗರ್ಭಿಣಿಯಾದ ಬಳಿಕವೇ ಕಿರುಕುಳ ವಿಷಯ ಬೆಳಕಿಗೆ ಬಂದಿದೆ