ಕುಂಬಳೆಯಲ್ಲಿ ಬಿಜೆಪಿಯಿಂದ ವಿಕಸಿತ ಭಾರತ ಸಂಕಲ್ಪ ಸಭೆ
ಕುಂಬಳೆ: ಬಿಜೆಪಿ ಕುಂಬಳೆ ಮಂಡಲ ಸಮಿತಿ ನೇತೃತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಸಭೆ ನಡೆಸಲಾಯಿತು. ಕುಂಬಳೆ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮವನ್ನು ಜಿಲ್ಲಾ ಚುನಾವಣಾ ಪ್ರಭಾರಿ ನ್ಯಾಯವಾದಿ ವಿ.ಕೆ.ಸಜೀವನ್ ಉದ್ಘಾಟಿಸಿದರು. ಮಂಡಲ ಅಧ್ಯಕ್ಷ ಸುನಿಲ್ ಅನಂತಪುರ ಅಧ್ಯಕ್ಷತೆ ವಹಿಸಿದರು. ಜಿಲ್ಲಾ ಕಾರ್ಯದರ್ಶಿ ಮತ್ತು ಮಂಡಲ ಪ್ರಭಾರಿ ಮಹೇಶ್ ಗೋಪಾಲ್, ವಿ. ರವೀಂದ್ರನ್, ನ್ಯಾಯವಾದಿ ಬಾಲಕೃಷ್ಣ ಶೆಟ್ಟಿ, ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ರೈ ಮಾತನಾಡಿದರು. ಮಂಡಲ ಪ್ರಧಾನ ಕಾರ್ಯದರ್ಶಿ ವಸಂತ ಕುಮಾರ್ ಮಯ್ಯ ಸ್ವಾಗತಿಸಿ, ಕಾರ್ಯದರ್ಶಿ ಪ್ರದೀಪ್ ಕುಮಾರ್ ವಂದಿಸಿದರು.