256.02 ಗ್ರಾಂ ಎಂಡಿಎಂಎ ಪತ್ತೆ: ಇಬ್ಬರ ಸೆರೆ

ಕಾಸರಗೋಡು: ಕಾರಿನಲ್ಲಿ ಸಾಗಿಸುತ್ತಿದ್ದ ಮಾದಕದ್ರವ್ಯವಾದ 256.02 ಗ್ರಾಂ ಎಂಡಿಎಂಎಯನ್ನು ಪೊಲೀಸರು ಪತ್ತೆಹಚ್ಚಿ ವಶಪಡಿಸಿದ್ದಾರೆ. ಇದಕ್ಕೆ ಸಂಬಂಧಿಸಿ ಮುಳಿಯಾರು ಪೊವ್ವಲ್ ಸಮೀದ್ ಮಹಲ್‌ನ ಮೊಹಮ್ಮದ್ ಡಾನೀಶ್ (30) ಮತ್ತು ಚೆಂಗಳ ಆಲಂಪಾಡಿಯ ಅಬ್ದುಲ್ ಖಾದರ್ (40) ಎಂಬಿವರನ್ನು ಪೊಲೀಸರು ಬಂಧಿಸಿದ್ದಾರೆ.

ಮೂನಾಂಕಡವಿನಲ್ಲಿ ಬೇಕಲ ಪೊಲೀಸರು ವಾಹನ ತಪಾಸಣೆಯಲ್ಲಿ ತೊಡಗಿದ್ದ ವೇಳೆ ಆ ದಾರಿಯಾಗಿ ಬಂದ ಕಾರನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಅದರ ಹಿಂದುಗಡೆ ಸೀಟಿನಲ್ಲಿ ಎಂಡಿಎಂಎ ಪತ್ತೆಯಾಗಿದೆ.  ತಕ್ಷಣ ಅದರಲ್ಲಿದ್ದ ಆರೋಪಿಗಳು ಮತ್ತು ಕಾರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಜಿಲ್ಲಾ ವರಿಷ್ಠ ಪೊಲೀಸ್ ಅಧಿಕಾರಿ ಬಿ.ವಿ. ವಿಜಯ್ ಭರತ್ ರೆಡ್ಡಿಯವರ ನಿರ್ದೇಶ ಪ್ರಕಾರ ಬೇಕಲ ಡಿವೈಎಸ್ಪಿ ವಿ.ವಿ. ಮನೋಜ್, ಇನ್‌ಸ್ಪೆಕ್ಟರ್ ಎಂ.ವಿ.ಶ್ರೀದಾಸ್, ಎಸ್.ಐ. ಸವ್ಯಸಾಚಿ ಎಂ ನೇತೃತ್ವದ ಪೊಲೀಸರ ತಂಡ ಈ ಕಾರ್ಯಾಚರಣೆ ನಡೆಸಿದೆ.

You cannot copy contents of this page